28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆ. 26 – ಸೆ. 06 : ಜಮಾಅತೆ ಇಸ್ಲಾಮೀ ಹಿಂದ್ ನಿಂದ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಜನ್ಮದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ : ಅನ್ವರ್ ಅಲಿ ಕಾಪು;

ವರದಿ /ಚಿತ್ರ :ಈ ಮೀಡಿಯಾ

ಕಾಪು : ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026 ರಿಂದ 06-09-2026ರ ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದ್ದು, ಅಭಿಯಾನದ ಶೀರ್ಷಿಕೆ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್ (ಸ)’ ಎಂಬುದಾಗಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಸ್ಥಾನೀಯ ಅಧ್ಯಕ್ಷ ಅನ್ವರ್ ಅಲಿ ಕಾಪು ಹೇಳಿದ್ದಾರೆ.

ಅವರು ಸೋಮವಾರ ಬೆಳಿಗ್ಗೆ ಕಾಪು ಪತ್ರಿಕಾ ಬವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನೀಡಿದರು. ಮಾಹಿತಿಪ್ರವಾದಿ ಮುಹಮ್ಮದ್(ಸ)ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನರ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ರ್ಯವನ್ನು ಶುದ್ದೀಕರಿಸುವಮೂಲಕ ವ್ಯಕ್ತಿಗಳನ್ನು, ಸಮಾಜವನ್ನು ಪರಿವರ್ತಿಸಿದರು.

ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ &e ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು.ಪ್ರವಾದಿ ಮುಹಮ್ಮದ್(ಸ)ರವರು ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ.

ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)’ ఎంబ ಶೀರ್ಷಿಕೆಯಡಿ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ, ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಯಾಲಿಗಳುಕಾಪು ತಾನು ಕಾರ್ಯನಿರತ ಪತ್ರಕರ್ತರ ಸಂಘ, ಕಾಪು (ಉದುಮ @ ಕಾರ್ಯನಿಂ ಕರ್ತರ ಸಂಘದ ಸಂಸ್ಥೆ)ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿರುವುದು.

ಅಭಿಯಾನದ ಪ್ರಯುಕ್ತ, ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಯೋಗೇಶ್ ಮಾಸ್ಟರ್ ಅವರು ಬರೆದ ‘ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)’ ಕೃತಿಯನ್ನು ಹಿರಿಯ ಪತ್ರಕರ್ತ ಬಾಲಕೃಷ್ಣ ಪೂಜಾರಿ ಉಚ್ಚಿಲ ಮತ್ತು ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ ‘ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್ (ಸ)’ ಎಂಬ ಕೃತಿಯನ್ನು ಕಾಪು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಮೀದ್ ಪಡುಬಿದ್ರಿಯವರು ಕಾಪು ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಪದಾಧಿಕಾರಿಗಳಾದ ಇನ್ಸಾಲ್ ಸಾಹೇಬ್, ಮಹಮ್ಮದ್ ಅಲಿ, ಮುಹಮ್ಮದ್ ಹಾಶಿಂ, ಮಹಮ್ಮದ್ ಶರೀಫ್ ಶೇಖ್ ಉಪಸ್ಥಿತರಿದ್ದರು.

Related posts

ಎರ್ಮಾಳು ಶ್ರೀನಿಧಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ: ಪಡುಬಿದ್ರಿ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಶ್ರೀಮತಿ ರಾಜಶ್ರೀ ಕಿಣಿ ಉಪಸ್ಥಿತಿ;

Voiceoftulunadu

ಶ್ರೀ ಕ್ಷೇತ್ರ ಶಂಕರಪುರ: ಉಸಿರಿಗಾಗಿ ಹಸಿರು ಅಭಿಯಾನಕ್ಕೆ ಚಾಲನೆ:ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಕ್ಷೇತ್ರ ಶಂಕರಪುರ ಧರ್ಮಪೀಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ ಗುರೂಜಿ;

Voiceoftulunadu

UAE ಗಾಣಿಗ ಫ್ಯಾಮಿಲಿ ವತಿಯಿಂದ ಅದ್ದೂರಿಯಾಗಿ “ಗಾಣಿಗ ಸಂಗಮ 2026” ಕಾರ್ಯಕ್ರಮ ;

Voiceoftulunadu

Leave a Comment