July 6, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಪ್ರಕೃತಿ ಲಯನ್ಸ್ ಕ್ಲಬ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ.ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಶೀರೂರು ಆಯ್ಕೆ;

ವರದಿ/ ಚಿತ್ರ:ಇ ಮೀಡಿಯಾ

ಉಡುಪಿ: ಉಡುಪಿ ಪ್ರಕೃತಿ ಲಯನ್ಸ್ ಕ್ಲಬ್‌ನ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಎಲ್ಲಾ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನೂತನ ಅಧ್ಯಕ್ಷರಾಗಿ ಲಯನ್ ಪ್ರಮೋದ್ ಕುಮಾರ್ ಶೆಟ್ಟಿ, ಕಾರ್ಯದರ್ಶಿಯಾಗಿ ಲಯನ್ ಪ್ರಶಾಂತ್ ಶೀರೂರು, ಖಜಾಂಚಿಯಾಗಿ ಲಯನ್ ಸದಾಶಿವ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಲಯನ್ ಸುಧಾಕರ್ ವಿ. ಶೆಟ್ಟಿ ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳನ್ನು ಕ್ಲಬ್‌ನ ಸದಸ್ಯರು ಅಭಿನಂದಿಸಿ, ಅವರ ಸಮರ್ಥ ನೇತೃತ್ವದಲ್ಲಿ ಸಮಾಜಮುಖಿಸೇವಾ ಕಾರ್ಯಕ್ರಮಗಳು, ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಹಾಗೂ ಜನಪರ ಚಟುವಟಿಕೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜರುಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಕ್ಲಬ್‌ನ ಹಿರಿಯ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು, ನೂತನ ಆಡಳಿತ ಮಂಡಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು.

ನೂತನ ತಂಡವು ಲಯನ್ಸ್ ಚಳವಳಿಯ ಧೈಯೋದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ಸಮಾಜ ಸೇವೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ನಿರ್ಮಿಸಲಿ ಎಂದು ಸದಸ್ಯರು ಆಶಯ ವ್ಯಕ್ತಪಡಿಸಿದರು.

Related posts

ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡೊನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವ ಹೃದಯ ರೋಗಿಗಳಿಗೆ ಆಳ್ವಾಸ್ ಹೆಲ್ತ್ ಸೆಂಟರ್ ನಲ್ಲಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ :

voiceoftulunadu

ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿಯಾಗಿ ಈಥನ್ ರಫಾಯೆಲ್ ತೌರೊ ನೇಮಕ

Voiceoftulunadu

ದರ್ಶನ್‌ಗೆ ಭಾರೀ ಹಿನ್ನಡೆ| ಇನ್ನೂ 1 ವರ್ಷ ಜೈಲು ಫಿಕ್ಸ್‌ – ಕೋರ್ಟ್‌ ಆದೇಶದಲ್ಲಿ ಏನಿದೆ?|

voiceoftulunadu

Leave a Comment