July 7, 2026
ಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕಂಬಳಕ್ಕೆ ವಿಶೇಷ ಸ್ಥಾನಮಾನ: ಸಿಎಂ ಡಿಕೆಶಿ ವಾರ್ಷಿಕ 5 ಕೋಟಿ ಅನುದಾನ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಭರವಸೆ ;

ವರದಿ ಚಿತ್ರ ಇ ಮೀಡಿಯಾ

ಬೆಳಪು: ರಾಜ್ಯ ಸರಕಾರ ಕಂಬಳಕ್ಕೆ ರಾಜ್ಯ ಮಾನ್ಯತೆ ನೀಡಿದ್ದು ಮಾನ್ಯ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರು ಕಂಬಳ ಆಯೋಜನೆಗೆ ಪ್ರತಿವರ್ಷ ಬಜೆಟ್‌ನಲ್ಲಿ ೫ ಕೋಟಿ ಅನುದಾನ ನೀಡುವ ಭರವಸೆ ನೀಡಿದ್ದಾರೆಂದು ರಾಜ್ಯ ಕಂಬಳ ಅಸೋಸಿಯೇಶನ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ

ಪ್ರಥಮ ಸಂಪುಟ ಸಭೆಯಲ್ಲಿ ಕಂಬಳಕ್ಕೆ ವಿಶೇಷ ಸಹಕಾರ ಹಾಗೂ ರಾಜ್ಯ ಕಂಬಳ ಅಸೋಸಿಯೇಶನ್ ಹೆಚ್ಚಿನ ಅಧಿಕಾರ ಮತ್ತು ಅನುದಾನ ನೀಡುವ ಭರವಸೆ ನೀಡಿದ್ದಾರೆ. ಮುಖ್ಯ ಮಂತ್ರಿಯವರು ಕಂಬಳವನ್ನು ಮೈಸೂರು ದಸರಾದಲ್ಲಿ ನಡೆಸುವ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದು, ಕೆ.ಎಮ್.ಎಫ್ ಪ್ರಾಯೋಜಕತ್ವದಲ್ಲಿ ಕಂಬಳ ನಡೆಸಿ ರೈತರಿಗೆ ಪ್ರೋತ್ಸಾಹ ಮತ್ತು ಪ್ರಚಾರ ನೀಡುವ ಯೋಜನೆ ರೂಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ ಎನ್ನಲಾಗಿದೆ.

ಕಂಬಳಕ್ಕೆ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ, ಪ್ರವಾಸೋದ್ಯಮ ಇಲಾಖೆಯ ಮೂಲಕ ದೊರಕುವ ಸವಲತ್ತುಗಳನ್ನು ಸರಕಾರ ಒದಗಿಸುವಂತೆ, ಕಂಬಳ ಭವನ ನಿರ್ಮಾಣಕ್ಕೆ ಸರಕಾರಿ ಜಾಗ ಮಂಜೂರಾತಿ ಮತ್ತು ತರಬೇತು ಕೇಂದ್ರ ಸ್ಥಾಪನೆಗೆ ಕ್ರೀಡಾ ಇಲಾಖೆ ಸಹಭಾಗಿತ್ವ ಹಾಗೂ ರಾಜ್ಯ ಕಂಬಳ ಅಸೋಸಿಯೇಶನ್‌ಗೆ ವಿಶೇಷ ಸ್ಥಾನಮಾನ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳು ಸಹಮತ ವ್ಯಕ್ತಪಡಿಸಿದ್ದಾರೆ.

ಡಾ. ದೇವಿಪ್ರಸಾದ್‌ ಶೆಟ್ಟಿಯವರು ಸಿಎಂ ಡಿಕೆಶಿಯವರನ್ನು ಭೇಟಿ ಮಾಡಿ, ಕಂಬಳಾಭಿಮಾನಿಗಳ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಕರಾವಳಿಯ ಕಂಬಳ ಕ್ರೀಡೆಗೆ ವಿಶೇಷ ಸಹಕಾರ ನೀಡುವ ಬಗ್ಗೆ ಮನವಿ ನೀಡಲಾಗಿದ್ದು, ಕಂಬಳಕ್ಕೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆಂದು ರಾಜ್ಯ ಕಂಬಳ ಅಸೋಸಿಯೇಶನ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.

Related posts

ಹಿರಿಯ ಪತ್ರಕರ್ತ-ನಿವೃತ್ತ ಪ್ರಾಂಶುಪಾಲ ಪ್ರೊ| ಕೆ. ಬಾಲಕೃಷ್ಣ ಗಟ್ಟಿ ನಿಧನ:

voiceoftulunadu

ಡಾ. ಜಿ.ಪರಮೇಶ್ವರ್ ಅವರು ತಮ್ಮ ವ್ಯಕ್ತಿತ್ವದಿಂದ ಶ್ರೀಮಂತರು : ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ;

Voiceoftulunadu

ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್, ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿವಕುಮಾರ್ ಘೋಷಣೆ

Voiceoftulunadu

Leave a Comment