September 6, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮಸಿನಿಮಾಸಿನಿಮಾ/ಮನರಂಜನೆ

ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳಿಗೆ ಸನ್ಮಾನ ;

ಬೆಂಗಳೂರು, ಆ.16- ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ವತಿಯಿಂದ ಪ್ರಸಕ್ತ ಸಾಲಿನ ಚುನಾವಣೆಯಲ್ಲಿ ಆಯ್ಕೆಯಾದ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಕಲಾವಿದರ ಬಳಗದ ಅಧ್ಯಕ್ಷ ಗಣೇಶ್ ರಾವ್ ಕೆಸರ್ಕಾರ್ ಸೇರಿದಂತೆ ನೂತನ ಪದಾಧಿಕಾರಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಕಲಾವಿದರ ಸಂಘಟನೆಗಳು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುವ ಮೂಲಕ ಕಲಾವಿದರ ಹಿತಾಸಕ್ತಿ, ಸಮಸ್ಯೆಗಳು ಹಾಗೂ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಆಶಿಸಿದರು.

ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದ ಕಲಾವಿದರು, ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಬೆಳವಣಿಗೆಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು. ಕಲಾವಿದರ ಉಪಸ್ಥಿತಿ ಮತ್ತು ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಕಾರ್ಯಕ್ರಮದಲ್ಲಿ ರಾಮಸ್ವಾಮಿ, ವೀರೇಂದ್ರಬೆಳ್ಳಿಚುಕ್ಕಿ ಸೇರಿದಂತೆ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ವೇದಿಕೆಯಲ್ಲಿ ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಅಧ್ಯಕ್ಷ ಡಿಂಗ್ರಿ ನಾಗರಾಜ್,ಗಂಡಸಿ ಸದಾನಂದ ಸ್ವಾಮಿ, ಲಗ್ಗೆರೆ ನಾರಾಯಣಸ್ವಾಮಿ, ನವನೀತಂ ಪುಷ್ಪಸ್ವಾಮಿ, ಆಡುಗೋಡಿ ಶ್ರೀನಿವಾಸ್, ಕವನ, ಜೂನಿಯರ್ ಜಗ್ಗಿ, ಭೂಮಿ ರೆಡ್ಡಿ ಸೇರಿದಂತೆ ಹಲವು ಕಲಾವಿದರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಹಮದಾಬಾದ್-ಮಂಗಳೂರು ಜಂಕ್ಷನ್-ಅಹಮದಾಬಾದ್ ರೈಲುಯಾನ‘ವೀಕ್ಲಿ ಟ್ರೈನ್ ಆನ್ ಡಿಮ್ಯಾಂಡ್’ ವಿಶೇಷ ರೈಲು ಸಂಚಾರ ಅವಧಿ ವಿಸ್ತಾರ;

Voiceoftulunadu

ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಪದ್ಮಪ್ರಸಾದ್ ಜೈನ್ ದೂರು ದಾಖಲು;

Voiceoftulunadu

ಬೆಳೆ ವಿಮೆ ಅವಧಿ ವಿಸ್ತರಣೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ಜುಲೈ 15ರವರೆಗೆ ವಿಸ್ತರಿಸಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಿಬಹುದು;

Voiceoftulunadu

Leave a Comment