September 5, 2026
Uncategorizedಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಕಡಲೊರೆತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ ::ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಯುಟಿ ಖಾದ‌ರ್ ;

ಕಾಪು : ಕಾಪು ತಾಲೂಕಿನ ಕಡಲ್ಗೊರೆತ ಪೀಡಿತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಶುಕ್ರವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಕಡಲೊರೆತದಿಂದ ಉಂಟಾಗಿರುವ ಹಾನಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ತಾತ್ಕಾಲಿಕ ಹಾಗೂ ಶಾಶ್ವತ ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಳಿಕ ಕಾಪು ತಾಲೂಕು ಕಚೇರಿಯ ಕೋರ್ಟ್ ಹಾಲ್ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಉಸ್ತುವಾರಿ ಸಚಿವ ಯುಟಿ ಖಾದರ್ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಮಳೆಗಾಲದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ಕೈಗೊಂಡಿರುವ ಸಿದ್ಧತೆಗಳು, ವಿವಿಧ ಇಲಾಖೆಗಳ ಸಮನ್ವಯ, ರಕ್ಷಣಾ ಕಾರ್ಯಾಚರಣೆಗಳು ಹಾಗೂ ಸಾರ್ವಜನಿಕ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಕುರಿತು ಸಮಗ್ರ ಪರಿಶೀಲನೆನಡೆಸಲಾಯಿತು.

ತುರ್ತು ಪರಿಸ್ಥಿತಿಯಲ್ಲಿ ಅಧಿಕಾರಿಗಳು ಕ್ಷಿಪ್ರವಾಗಿ ಸ್ಪಂದಿಸಿ, ಸಂಕಷ್ಟಕ್ಕೆ ಸಿಲುಕಿದ ಸಾರ್ವಜನಿಕರಿಗೆ ಸರ್ಕಾರದ ನಿಯಮಾನುಸಾರ ತಕ್ಷಣದ ಪರಿಹಾರಧನ ವಿತರಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸಚಿವರು ಸೂಚನೆ ನೀಡಿದರು.

ಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಟಪಾಡಿ ಮೀನು ಮಾರುಕಟ್ಟೆಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭೇಟಿ; ಕುಂದು ಕೊರತೆಯ ಬಗ್ಗೆ ಮೀನುಗಾರ ಮಹಿಳೆಯರೊಂದಿಗೆ ಚರ್ಚೆ:

Voiceoftulunadu

ಕಾಪು: ಯುವವಾಹಿನಿ ಟ್ರೋಫಿ 2026 ಚೆಸ್ ಪಂದ್ಯಾವಳಿಗೆ ಚಾಲನೆ.ಕಾಪು ಹಳೆ ಮಾರಿಯಮ್ಮಗುಡಿಯ ಸಭಾಭವನದಲ್ಲಿ ನಡೆದ ಪಂದ್ಯಾವಳಿ ;

Voiceoftulunadu

ಸಾಂಪ್ರದಾಯಿಕ ನಾಟಿ ಮುಂದುವರಿಸುತ್ತಿರುವ ಯುವ ರೈತ ಹರೀಶ್ ಪೂಜಾರಿ ಕಿಶೋ‌ರ್ ಪೂಜಾರಿ : ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಎಲ್ಲೂರು ಶಶಿಧರ್ ಶೆಟ್ಟಿ, ಸದಸ್ಯರಿಂದ ಶ್ಲಾಘನೆ;

Voiceoftulunadu

Leave a Comment