28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಹೊಸ ಮಾರಿಗುಡಿಗೆ ರಾಜ್ಯ ಸಮಗ್ರ ಶಿಕ್ಷಣ ಇಲಾಖಾ ಯೋಜನಾ ನಿರ್ದೇಶಕಿ ಡಾ. ವಿದ್ಯಾಕುಮಾರಿ ಭೇಟಿ: ವಿಶೇಷ ಪೂಜೆ ಸಲ್ಲಿಸಿ ಅನುಗ್ರಹ ಪ್ರಸಾದ ನೀಡಿದ ಮಾರಿಗುಡಿಯ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ;

ವರದಿ ಚಿತ್ರ ಈ ಮೀಡಿಯಾ

ಕಾಪು: ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ವಿದ್ಯಾಕುಮಾರಿಯವರು ಪ್ರಸ್ತುತ ಕರ್ನಾಟಕ ರಾಜ್ಯದ ಸಮಗ್ರ ಶಿಕ್ಷಣ ಇಲಾಖೆಯ ಯೋಜನಾ ನಿರ್ದೇಶಕರಾಗಿ ಬಡ್ತಿಯಾಗಿದ್ದು, ದಂಪತಿ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.

ಮಾರಿಗುಡಿಯ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಯವರು ವಿಶೇಷ ಪೂಜೆ ಸಲ್ಲಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭ ಕರ್ನಾಟಕ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಸದಸ್ಯ ಮಾಧವ ಪಾಲನ್, ಸುನಿಲ್ ಎಸ್. ಪೂಜಾರಿ, ಪ್ರಬಂಧಕ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಮತ್ತಿತರರು ಉಪಸ್ಥಿತರಿದ್ದರು.

Related posts

ಹುತ್ತದ ಹಾಲಿನ ಹಬ್ಬ: ಪ್ರಕೃತಿಯ ಮಡಿಲಲ್ಲಿ ಮೈವೆತ್ತ ನಾಗರಪಂಚಮಿ;

Voiceoftulunadu

ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಅವರಿಗೆ ಡಾಕ್ಟರೇಟ್ ಪ್ರಧಾನ;

Voiceoftulunadu

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಜಪಾನ್ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಶ್ರೀಕಲಾ ಬೊಳ್ಳಾಜೆ ನೇಮಕ ;

Voiceoftulunadu

Leave a Comment