28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಿನಾರಾ ಗ್ಲೋಬಲ್ ಶಾಲೆಯಲ್ಲಿ ಶಾಲಾ ಸಂಸತ್ತು ಪದ ಪ್ರದಾನ, ಮಾದಕ ವಸ್ತು ಜಾಗೃತಿ ಕಾರ್ಯಕ್ರಮ:ಕಾರ್ಯಕ್ರಮ ಉದ್ಘಾಟಿಸಿದ ಕಾಪು ಪೊಲೀಸ್ ವೃತ್ತ ನೀರೀಕ್ಷಕ ಅಜ್ಜತ್ ಅಲಿ;

ವರದಿ /ಚಿತ್ರ :ಈ ಮೀಡಿಯಾ

ಎರ್ಮಾಳು ತೆಂಕ : ಎರ್ಮಾಳು ತೆಂಕ ಕಿನಾರಾ ಗ್ಲೋಬಲ್ ಶಾಲೆಯಲ್ಲಿ ಶನಿವಾರ ಸಂಸತ್ ಪದಪ್ರದಾನ ಸಮಾರಂಭ ಹಾಗೂ ಮಾದಕ ವಸ್ತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.

    ಕಾರ್ಯಕ್ರಮವನ್ನು ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜ್ಜತ್ ಅಲಿ. ಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

    ಅವರು ವಿದ್ಯಾರ್ಥಿಗಳಿಗೆ ನಾಯಕತ್ವ ಗುಣಗಳ ಮಹತ್ವ, ಶಿಸ್ತು ಹಾಗೂ ಜವಾಬ್ದಾರಿಯುತ ವರ್ತನೆ ಬಗ್ಗೆ ತಿಳಿಸಿದರು. ಜೊತೆಗೆ ಮಾದಕ ವಸ್ತುಗಳ ದುಷ್ಪರಿಣಾಮಗಳು ಹಾಗೂ ಸೈಬರ್

    ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಿ, ತಂತ್ರಜ್ಞಾನವನ್ನು ಜಾಗರೂಕತೆಯಿಂದ ಬಳಸುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

    ಕಾರ್ಯಕ್ರಮದಲ್ಲಿ ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿ ಮುಂಬೈ ಇದರ ಅಧ್ಯಕ್ಷ ಸುರೇಶ್ ಕುಂದರ್, ಕಿನಾರಾ ಗ್ಲೋಬಲ್ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಕಿಶೋರ್ ಕುಮಾ‌ರ್, ಎರ್ಮಾಳು ತೆಂಕ ಮೊಗವೀರ ಸಭಾದ ಅಧ್ಯಕ್ಷ ಲಿಂಗಪ್ಪ ಪುತ್ರನ್, ಶಾಲಾ ಕಟ್ಟಡ ನಿಧಿ ಸಂಗ್ರಹ ಸಮಿತಿ ಅಧ್ಯಕ್ಷ ದಾಮೋದರ ಸುವರ್ಣ, ಸೊಸೈಟಿ ಕಾರ್ಯದರ್ಶಿ ಪ್ರಭಾಕರ್ ಪುತ್ರನ್, ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿ ಹಾಗೂವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಪಿಟಿಎ ಪ್ರತಿನಿಧಿ ಶ್ರೀಮತಿ ತುಳಸಿ ಉದಯ್ ಕರ್ಕೇರ ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರೀತಿ ಸುವರ್ಣರವರು ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

    ಶಿಕ್ಷಕಿ ಕುಮಾರಿ ವಿಕೆತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ಶುಶಾಂಕಾ ಸ್ವಾಗತಿಸಿದರು. ಶ್ರೀಮತಿ ವಂದಿಸಿದರು

    Related posts

    ಮುಖ್ಯಮಂತ್ರಿಯವರಿಂದ ಕಂಬಳಕ್ಕೆ ವಾರ್ಷಿಕ 5 ಕೋಟಿ ಅನುದಾನದ ಭರವಸೆ: ರಾಜ್ಯ ಕಂಬಳ ಅಸೋಸಿಯೇಶನ್‌ ಅಧ್ಯಕ್ಷ ಡಾ. ದೇವಿಪ್ರಸಾದ್‌ ಶೆಟ್ಟಿ ಮಾಹಿತಿ ;

    Voiceoftulunadu

    ಮಹಾರಾಷ್ಟ್ರ ವಿಧಾನ ಪರಿಷತ್ತ್‌ನ ಉಪ ಸಭಾಪತಿ ಸಚಿನ್ ಭಾವು ಅಹಿರೆ ಅವರನ್ನು ಅಭಿನಂದಿಸಿದ ಎನ್‌ಸಿಪಿ ಧುರೀಣ ಲಕ್ಷ ಣ ಪೂಜಾರಿ ಚಿತ್ರಾಪು ;

    Voiceoftulunadu

    ರಾಜ್ಯ ಸರಕಾರದಿಂದ ಯೋಜನೆಗಳು ಮೂಲೆಗುಂಪು : ಸಂಸದ ಕೋಟ ಆರೋಪ, ರಾಜ್ಯ ಸರಕಾರದ ವೈಫಲ್ಯಗಳ ವಿರುದ್ಧ ಕಾಪು ಬಿಜೆಪಿ ಪ್ರತಿಭಟನೆ :

    Voiceoftulunadu

    Leave a Comment