ಕೃಪೆ : ಪಿಂಗಾರ
ಮಂಗಳೂರು, ಅ. 12: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಹಾಗೂ ವೈಭವದ ಮಂಗಳೂರು ದಸರಾ ಆಚರಣೆಗೆ ಭಾನುವಾರ ಚಾಲನೆ ನೀಡಲಾಯಿತು.

ಮಾಜಿ ಕೇಂದ್ರ ಸಚಿವರು ಹಾಗೂ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಕ್ಷೇತ್ರದ ದರ್ಬಾರ್ ಮಂಟಪದಲ್ಲಿ ಶ್ರೀ ಮಹಾಗಣಪತಿ, ಶ್ರೀ ಶಾರದಾ ಮಾತೆ ಹಾಗೂ ಆದಿಶಕ್ತಿ, ಸ್ಕಂದಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ ಮತ್ತು ಕೂಷ್ಮಾಂಡಾ ಸೇರಿದಂತೆ ದೇವಿಯ ವಿವಿಧ ಸ್ವರೂಪಗಳ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹಾಗೂ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜಯರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಟ್ರಸ್ಟಿಗಳಾದ ಎಚ್.ಎಸ್. ಸಾಯಿರಾಮ್, ಸಂತೋಷ್ ಕುಮಾರ್ ಜೆ., ಜಗದೀಪ್ ಡಿ. ಸುವರ್ಣ, ಕೃತಿನ್ ಅಮೀನ್ ಹಾಗೂ ಕಿಶೋರ್ ದಂಡೇಕೇರಿ, ಪ್ರಮುಖರಾದ ಮಾಲತಿ ಜನಾರ್ದನ ಪೂಜಾರಿ ಉಪಸ್ಥಿತರಿದ್ದರು.
ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹಾಧ್ಯಕ್ಷೆ ಡಾ. ಅನಸೂಯಾ ಬಿ.ಟಿ. ಸಾಲ್ಯಾನ್, ಉಪಾಧ್ಯಕ್ಷ ಡಾ. ಬಿ.ಜಿ. ಸುವರ್ಣ ಹಾಗೂ ಸಮಿತಿಯ ಸದಸ್ಯರಾದ ವೇದಕುಮಾರ್, ಕೆ. ಚಿತ್ತರಂಜನ್ ಗರೋಡಿ, ಹರೀಶ್ ಕುಮಾರ್ ಬೆಳ್ತಂಗಡಿ, ವಿಶ್ವನಾಥ್ ಕಾಸರಗೋಡು, ಎಸ್. ಜಯವಿಕ್ರಮ್, ಜಿತಿನ್ ಅತ್ತಾವರ, ಹರಿಕೃಷ್ಣ ಬಂಟ್ವಾಳ, ಎನ್. ಹರಿಶ್ಚಂದ್ರ, ರಾಮನಾಥ ಕರಂದೂರು, ಧೂಮಪ್ಪ ಮೇಸ್ತ್ರಿ, ಲೀಲಾಕ್ಷ ಕರ್ಕೇರ, ಶೈಲೇಂದ್ರ ವೈ. ಸುವರ್ಣ, ಸೂರ್ಯಕಾಂತ್ ಜೆ. ಸುವರ್ಣ, ರಾಧಾಕೃಷ್ಣ, ಚಂದನ್ ದಾಸ್, ಡಿ.ಡಿ. ಕಟ್ಟೆಮಾರ್, ಪಿ.ಕೆ. ಗೌರವಿ ರಾಜಶೇಖರ್, ಬಿ. ವಾಸುದೇವ ಕೋಟ್ಯಾನ್, ಲತೀಶ್ ಎಂ. ಸುವರ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

ಈ ಬಾರಿ ಪ್ರಥಮ ಬಾರಿಗೆ ಮಹಿಳಾ ದಸರಾ ಆಯೋಜನೆ :
ಸುದ್ದಿಗಾರರೊಂದಿಗೆ ಮಾತನಾಡಿದ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಅವರು, ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಹಾಗೂ ಜಿಲ್ಲಾಡಳಿತ ಮತ್ತು ಅಭಿವೃದ್ಧಿ ಸಮಿತಿಯ ಸಹಕಾರದೊಂದಿಗೆ ಈ ವರ್ಷದ ಮಂಗಳೂರು ದಸರಾ ಆರಂಭಗೊಂಡಿದೆ ಎಂದು ತಿಳಿಸಿದರು.
ಈ ಬಾರಿ ಪ್ರಥಮ ಬಾರಿಗೆ ‘ಮಹಿಳಾ ದಸರಾ’ ಆಯೋಜಿಸಲಾಗುತ್ತಿದೆ. ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಅಕ್ಟೋಬರ್ 20ರಂದು ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.
ಈ ವರ್ಷ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದ್ದು, ಉತ್ಸವದ ಸುಗಮ ನಿರ್ವಹಣೆಗಾಗಿ ಒಂದು ಸಾವಿರಕ್ಕೂ ಅಧಿಕ ಸ್ವಯಂಸೇವಕರನ್ನು ನಿಯೋಜಿಸಲಾಗಿದೆ ಎಂದು ಪದ್ಮರಾಜ್ ಆರ್. ಪೂಜಾರಿ ಹೇಳಿದರು.
