28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಜುಲೈ 31 – ಅಗಸ್ಟ್ 2ರ ವರೆಗೆ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026’ಬಲಾಯಿಪಾದೆ ಶ್ರೀ ನಾರಾಯಣ ಗುರು ಯುವ ವೇದಿಕೆಯ ಉದ್ಯಾನವನದಲ್ಲಿ ನಡೆದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ;

ಉದ್ಯಾವರ : ಕಲೆ, ಸಾಹಿತ್ಯ, ನಾಟಕ,ಸಂಗೀತ ಮತ್ತು ಸಿನಿಮಾ ಕ್ಕೆ ಪ್ರೋತ್ಸಾಹ ನೀಡುತ್ತಿರುವ ನಿರಂತರ್ ಉದ್ಯಾವರ್ ನೇತೃತ್ವದಲ್ಲಿ ಜುಲೈ 31 ರಿಂದ ಅಗಸ್ಟ್ 2ರವರೆಗೆ ನಡೆಯುವ ಮೂರು ದಿನದ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026’ ರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಬಲಾಯಿಪಾದೆ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ.) ಉದ್ಯಾನವನದಲ್ಲಿ ನಡೆಯಿತು.

ವಿವಿಧ ಧರ್ಮದ ಸಾಮಾಜಿಕ ಮುಖಂಡರುಗಳು ಜಂಟಿಯಾಗಿ ಪೋಸ್ಟ‌ರ್ ಬಿಡುಗಡೆಗೊಳಿಸಿದ್ದು, ಬಳಿಕ ಮಾತನಾಡಿದ ಶ್ರೀ ನಾರಾಯಣಗುರು ಯುವ ವೇದಿಕೆ ಉಡುಪಿ ಜಿಲ್ಲೆ ಇದರ ಗೌರವಾಧ್ಯಕ್ಷ ಸದಾಶಿವ ಕಟ್ಟೆಗುಡ್ಡೆ, ಸಾಮಾಜಿಕ ಕಳಕಳಿ ಮತ್ತು ಬದ್ಧತೆಯ ಇಂತಹ ಸಿನಿಮಾಗಳು ಸಮಾಜದಲ್ಲಿ ಬದಲಾವಣೆ ಮತ್ತು ಹೊಸತನಕ್ಕೆಕಾರಣವಾಗುತ್ತಿದೆ.

ಶ್ರೀ ನಾರಾಯಣ ಗುರುಗಳ ಚಿಂತನೆಯಂತೆ ಸಮಾಜ ಕಟ್ಟುವ ಪ್ರಯತ್ನದಲ್ಲಿ ನಾವೆಲ್ಲರೂ ಕೈಜೋಡಿಸೋಣ ಎಂದು ಸಿನಿಮಾ ಉತ್ಸವಕ್ಕೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಉಡುಪಿ ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ರೋಯ್ಸ್ ಫೆರ್ನಾಂಡಿಸ್, ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರಿಯಾಜ್ ಪಳ್ಳಿ, ಉಡುಪಿ ಸಿಂಡಿಕೇಟ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ವ್ಯವಸ್ಥಾಪಕ ಜೀವನ್ ಡಿಸೋಜಾ, ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಕಾರ್ಯದರ್ಶಿ ಜೋನ್ ಗೋಮ್ಸ್, ಕೋಶಾಧಿಕಾರಿ ವಿಲೈಡ್ ಡಿಸೋಜಾ ಉಪಸ್ಥಿತರಿದ್ದರು.

ನಿರಂತರ್ ಉದ್ಯಾವರ ಅಧ್ಯಕ್ಷ ರೋಷನ್ ಕ್ರಾಸೋ ಸ್ವಾಗತಿಸಿದರು. ನಿರಂತರ ಉದ್ಯಾವರದ ಸ್ಥಾಪಕ ಸ್ಟೀವನ್ಕುಲಾಸೊ ಕಾರ್ಯಕ್ರಮ ನಿರೂಪಿಸಿದರು. ರೊನಾಲ್ಡ್ ಡಿಸೋಜಾ ವಂದಿಸಿದರು.ಜುಲೈ 31ರಂದು ಶುಕ್ರವಾರ ಸೂತನ್ ಗೌಡ ರಚನೆ ಮತ್ತು ನಿರ್ದೇಶನದ ಕನ್ನಡ ಸಿನಿಮಾ ವಲವಾರ, ಅಗಸ್ಟ್ 1 ಶನಿವಾರ ಅನೀಶ್ ಪೂಜಾರಿ ವೇಣೂರು ರಚನೆ ಮತ್ತು ನಿರ್ದೇಶನದ ತುಳು ಸಿನಿಮಾ ದಸ್ಕತ್ ಮತ್ತು ಅಗಸ್ಟ್ 2 ರವಿವಾರ ಸ್ಕ್ಯಾನಿ ಬೆಳಾ ರಚನೆ ಮತ್ತು ನಿರ್ದೇಶನದ ಕೊಂಕಣಿ ಸಿನಿಮಾ ಬಾಪಾಚೆ ಪುತಾಚೆ ನಾಂವಿಂ ಪ್ರದರ್ಶನವಾಗಲಿದೆ.

ಉದ್ಯಾವರ ಗುಡ್ಡೆಅಂಗಡಿಯಲ್ಲಿರುವ ಸಂತ ಫ್ರಾನ್ಸಿಸ್ ಕ್ಷೇವಿಯರ್ ಚರ್ಚ್ ವಟಾರದಲ್ಲಿರುವ ಕ್ಷೇವಿಯರ್ ಸಭಾಭವನದಲ್ಲಿ ಪ್ರತಿದಿನ 6.30ಕ್ಕೆ ಈ ಸಿನಿಮಾಗಳು ಉಚಿತ ಪ್ರವೇಶದೊಂದಿಗೆ ನಡೆಯಲಿದೆ.

Related posts

ಸಂಗೀತ ಸಾಮ್ರಾಟ್’ ಹೆನ್ರಿ ಡಿ’ಸೋಜಾ ನಿಧನ ;

Voiceoftulunadu

ಪಡುಬಿದ್ರಿ ಮುಂಡಾಲ ಯುವ ವೇದಿಕೆಯಿಂದ ಆಟಿದ ಅಂಗಲಾಪು ಕಾರ್ಯಕ್ರಮ : ಪಡುಬಿದ್ರಿಯ ಸುಜಾತಾ ಆಡಿಟೋರಿಯಂನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ;

Voiceoftulunadu

ರಿಲೈನ್ಸ್ ಸ್ಮಾರ್ಟ್ ಬಜಾರ್ ವತಿಯಿಂದ ಆಯೋಜಿಸಲಾದ ‘ಆಟಿಡೊಂಜಿ ದಿನ’ ಕಾರ್ಯಕ್ರಮ.ಸ್ಥಳೀಯ ಆಹಾರ ಸಂಸ್ಕೃತಿಗೆ ಪ್ರೋತ್ಸಾಹ ನೀಡಿದ ರಿಲೈನ್ಸ್ ಸ್ಮಾರ್ಟ್ ಬಜಾರ್: ಜನಾರ್ದನ್ ಕೊಡವೂರು;

Voiceoftulunadu

Leave a Comment