28.5 C
ಮಂಗಳೂರು
September 4, 2026
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದಾಗಿದೆ, ಎಸ್.ಆರ್. ಸತೀಶ್ ಚಂದ್ರ :ಶಿರ್ವ ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕಾರಿಣಿ;

ಶಿರ್ವ : ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿಶೇಷವಾಗಿ ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಪ್ರಮುಖರಾದ ಎಸ್.ಆರ್. ಸತೀಶ್ ಚಂದ್ರ ಹೇಳಿದರು.ಅವರು ಮಂಗಳವಾರ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಸಹಕಾರ ಭಾರತಿ ಮೈಸೂರು ವಿಭಾಗದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಸುಬ್ರಹ್ಮಣ್ಯ ಎಡಗೆರೆ ವಹಿಸಿದ್ದರು.ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಮಾತನಾಡಿ, ಪ್ರತಿ ಜಿಲ್ಲೆಯಲ್ಲಿ ನಿಗದಿತ ದಿನಾಂಕದಂದು ನಿಯಮಿತ ಜಿಲ್ಲಾ ಕಾರ್ಯಕಾರಿಣಿ ಸಭೆಗಳನ್ನು ನಡೆಸುವ ಜೊತೆಗೆ, ಪ್ರತಿ ತಿಂಗಳು ವಿವಿಧ ತಾಲೂಕುಗಳಲ್ಲಿ ಸಭೆಗಳನ್ನುಆಯೋಜಿಸುವ ಮೂಲಕ ತಾಲೂಕು ಮಟ್ಟದಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕೆಂದು ಜಿಲ್ಲಾ ಪ್ರಮುಖರಿಗೆ ಮಾರ್ಗದರ್ಶನ ನೀಡಿದರು.

ರಾಜ್ಯ ಕಾರ್ಯದರ್ಶಿ ಮಾಧುಸ್ವಾಮಿ ಮಾತನಾಡಿ, ನವೆಂಬರ್ನಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬೃಹತ್ ಹೈನುಗಾರರ ಸಮಾವೇಶ, ಮಂಗಳೂರು ಮಹಾನಗರದಲ್ಲಿ ಕ್ರೆಡಿಟ್ ಸಹಕಾರಿ ಸಮಾವೇಶ ಹಾಗೂ ಚಿಕ್ಕಮಗಳೂರಿನಲ್ಲಿ ಜಿಲ್ಲಾ ಮಟ್ಟದ ಪ್ಯಾಕ್ಸ್ ಸಮಾವೇಶ ಆಯೋಜಿಸಲು ನಿರ್ಧರಿಸಲಾಯಿತು.ಇದೇ ಸಂದರ್ಭದಲ್ಲಿ ದೇಶದ ಪ್ರತಿಷ್ಠಿತ ಕ್ಯಾಂಪೋ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಪ್ರಥಮ ಬಾರಿಗೆ ಸಂಸ್ಥೆಗೆ ಆಗಮಿಸುತ್ತಿರುವ ಶ್ರೀ ಎಸ್ ಆರ್ ಸತೀಶ್ ಚಂದ್ರರವರಿಗೆ ಶಿರ್ವ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಪರವಾಗಿ ಸನ್ಮಾನಿಸಿ, ಗೌರವಿಸಲಾಯಿತು.

ಸಭೆಯಲ್ಲಿ ಮೈಸೂರು ನಗರ, ಮೈಸೂರು ಗ್ರಾಮಾಂತರ, ಹಾಸನ, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಮಹಾನಗರ, ಮಂಗಳೂರುಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಂದ ಆಗಮಿಸಿದ್ದ ಸುಮಾರು 40 ಮಂದಿ ರಾಷ್ಟ್ರೀಯ, ರಾಜ್ಯಮಟ್ಟದ ಜವಾಬ್ದಾರಿಯುಳ್ಳ ಪ್ರಮುಖರು ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಭಾಗವಹಿಸಿ ಸಂಘಟನೆಯ ಮುಂದಿನ ಕಾರ್ಯಯೋಜನೆಗಳ ಕುರಿತು ಸಮಗ್ರ ಚರ್ಚೆ ನಡೆಸಿದರು.

ವೇದಿಕೆಯಲ್ಲಿ ರಾಜ್ಯ ಮಹಿಳಾ ಪ್ರಮುಖ್ ಶ್ರೀಮತಿ ವಿದ್ಯಾ ಪೈ, ರಾಷ್ಟ್ರೀಯ ಗ್ರಾಹಕ ಭಂಡಾರ ಪ್ರಮುಖ ಶ್ರೀಮತಿ ಭಾರತಿ ಭಟ್, ರಾಷ್ಟ್ರೀಯ ಸದಸ್ಯರಾದ ಮಂಜುನಾಥ ಎಸ್ಕೆ ಯವರು ಉಪಸ್ಥಿತರಿದ್ದರು. ಕಾರ್ಯಕಾರಿಣಿಉಡುಪಿ ಜಿಲ್ಲಾಧ್ಯಕ್ಷ ದಿನೇಶ್ ಹೆಗಡೆ ಆತ್ರಾಡಿ ಸ್ವಾಗತಿಸಿದರು. ಮೈಸೂರು ವಿಭಾಗ ಪ್ರಮುಖ ಮೋಹನ್ ಕುಂಬಳೇಕ‌ರ್ ಕಾರ್ಯಕ್ರಮ ನಿರೂಪಿಸಿದರು. ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಸಹಕಾರ ಭಾರತಿ ಉಡುಪಿ ಜಿಲ್ಲಾ ಕೋಶಾಧ್ಯಕ್ಷ ಪ್ರಸಾದ್ ಶೆಟ್ಟಿ ವಂದಿಸಿದರು.

Related posts

ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ: ತಾಲೂಕು ಕಚೇರಿಗಳಿಗೆ ಲೋಕಾ ದಾಳಿ ;

Voiceoftulunadu

ನಮ್ಮ ಕರ್ನಾಟಕ ಸೇನೆ ಉಡುಪಿ ಜಿಲ್ಲಾ ಘಟಕದ ಮಹಿಳಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ: ಉಚ್ಚಿಲ ಸರಸ್ವತಿ ಮಂದಿರ ಪ್ರಾಥಮಿಕ ಶಾಲಾ ಮಕ್ಕಳಿಗೆ ಕಲಿಕೋಪಕರಣ ವಿತರಣೆ ;

Voiceoftulunadu

ಕರ್ನಾಟಕ ಪ್ರವಾಸಿ ತಾಣಗಳಿಗೆ ಆಕಾಶ ಮಾರ್ಗದ ಸಂಪರ್ಕ :13 ಕೇಂದ್ರಗಳಲ್ಲಿ ಬೃಹತ್ ‘ಕೇಬಲ್ ಕಾರ್’ ವ್ಯವಸ್ಥೆಗೆ ಸರ್ಕಾರ ಗ್ರೀನ್ ಸಿಗ್ನಲ್! ;

Voiceoftulunadu

Leave a Comment