27 C
ಮಂಗಳೂರು
July 6, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ನಮ್ಮ ಕರ್ನಾಟಕ ಸೇನೆ ಉಡುಪಿ ಜಿಲ್ಲಾ ಘಟಕದ ಮಹಿಳಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ: ಉಚ್ಚಿಲ ಸರಸ್ವತಿ ಮಂದಿರ ಪ್ರಾಥಮಿಕ ಶಾಲಾ ಮಕ್ಕಳಿಗೆ ಕಲಿಕೋಪಕರಣ ವಿತರಣೆ ;

ಉಚ್ಚಿಲ : ನಮ್ಮ ಕರ್ನಾಟಕ ಸೇನೆ ಉಡುಪಿ ಜಿಲ್ಲಾ ಮಹಿಳಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕದ ಸಮಾರಂಭವು ಉಚ್ಚಿಲ ಸರಸ್ವತಿ ಶಾಲೆಯಲ್ಲಿಶನಿವಾರ ಮಂದಿರ ನೆರವೇರಿತು.

ನಮ್ಮ ಕರ್ನಾಟಕ ಸೇನೆಯ ಆಚಾರ ವಿಚಾರ ಸಂಸ್ಕೃತಿ ಭಾಷೆ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಂಘಟಿತ ಹೋರಾಟ ಅಗತ್ಯವಿದೆ ಎಂದು ನಮ್ಮ ಕರ್ನಾಟಕ ಸೇನೆ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸುಜಯ್ ಪೂಜಾರಿ ಅಭಿಪ್ರಾಯಪಟ್ಟರು.

ನಮ್ಮ ಕರ್ನಾಟಕ ಸೇನೆ ಉಡುಪಿ ಜಿಲ್ಲಾ ಘಟಕದ ಮಹಿಳಾ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಅನಿತಾ ಬಿ ಯವರು ಉಡುಪಿ ಜಿಲ್ಲಾ ಘಟಕ ವತಿಯಿಂದ ಸಂಘಟನಾ ಬಲವರ್ಧನೆ ಹಾಗೂ ಮುಂದಿನ ಕಾರ್ಯ ಚಟುವಟಿಕೆಗಳ ರೂಪರೇಷೆಗಳನ್ನು ಸಿದ್ಧಪಡಿಸಿ, ಹೊಸ ಮಹಿಳಾ ಸದಸ್ಯರ ಸೇರ್ಪಡೆ ನಡೆದು, ನೂತನ ಮಹಿಳಾ ಸದಸ್ಯರಿಗೆ ಶಾಲು ಹಾಕಿ ಹೂ ಗುಚ್ಚ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸರಸ್ವತಿ ಪ್ರಾಥಮಿಕ ಶಾಲಾ ಮಂದಿರ ಮಕ್ಕಳಿಗೆ ಕಲಿಕೋಪಕರಣಗಳನ್ನು ವಿತರಿಸಲಾಯಿತು.

ಕಾಪು ವಲಯದ ಮಹಿಳಾ ಅಧ್ಯಕ್ಷರಾಗಿ ಶ್ರೀಮತಿ ಶಶಿರೇಖಾರವರನ್ನು ಮತ್ತು ಶ್ರೀಮತಿ ಅವಿತ ರವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.

ಜಿಲ್ಲಾ ಉಪಾಧ್ಯಕ್ಷ ಆನಂದ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸುಬ್ಬಣ್ಣ ಕಾಮತ್ ಹಾಗೂ ಸರಸ್ವತಿ ಮಂದಿರ ಶಾಲೆಯ ಮುಖ್ಯೋಪಾಧ್ಯಾಯ ಬಾಬುರಾಯ ವೇದಿಕೆಯಲ್ಲಿಉಪಸ್ಥಿತರಿದ್ದರು. ಆಚಾರ್ಯ

ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಅನಿತಾ ಇವರು ಸ್ವಾಗತಿಸಿದರು. ಶ್ರೀಮತಿ ಅವಿತಾ ನಿರೂಪಿಸಿದರು. ಶ್ರೀಮತಿ ಗೀತಾ ಬಾಲಕೃಷ್ಣ ವಂದಿಸಿದರು.

Related posts

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ 2 ದಿನಗಳ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಕೇಂದ್ರ ಸಚಿವೆ

voiceoftulunadu

ಫೋಟೋ, ವೀಡಿಯೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆ,ಉಪಾಧ್ಯಕ್ಷರಾಗಿ ಎಸ್ ರಘು, ಕಾರ್ಯದರ್ಶಿ ಪ್ರದೀಪ್, ಕೋಶಾಧಿಕಾರಿಯಾಗಿ ಪ್ರಸನ್ನ ಕುಲಕರ್ಣಿ ಆಯ್ಕೆ:

voiceoftulunadu

ಹಿರಿಯ ಪತ್ರಕರ್ತ-ನಿವೃತ್ತ ಪ್ರಾಂಶುಪಾಲ ಪ್ರೊ| ಕೆ. ಬಾಲಕೃಷ್ಣ ಗಟ್ಟಿ ನಿಧನ:

voiceoftulunadu

Leave a Comment