28.5 C
ಮಂಗಳೂರು
September 4, 2026
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ನಡೆದ ಬೃಹತ್ ಜಾಗೃತಿ ಕಾರ್ಯಕ್ರಮ: “ಆಪರೇಷನ್ ರೈಸ್” ಹಾಗೂ “ಬೇಡ ಬ್ರೋ” ಎಂಬ ಉಪಕ್ರಮಗಳಡಿಯಲ್ಲಿ ಮಾದಕ ವಸ್ತುಗಳ ವಿರುದ್ದ ಜಾಗೃತಿ ಅಭಿಯಾನದ ಅಂಗವಾಗಿ ನಡೆದ ವಿಶೇಷ ಕಾರ್ಯಕ್ರಮ:

ಮಂಗಳೂರು : “ಆಪರೇಷನ್ ರೈಸ್” ಹಾಗೂ “ಬೇಡ ಬ್ರೋ” ಉಪಕ್ರಮಗಳಡಿ ಮಾದಕ ವಸ್ತುಗಳ ವಿರುದ್ಧ ರಾಜ್ಯವ್ಯಾಪಿ ಜಾಗೃತಿ ಅಭಿಯಾನದ ಅಂಗವಾಗಿ ಇಂದು ಮಂಗಳೂರು ನಗರ ಪೊಲೀಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವತಿಯಿಂದ ಮಂಗಳೂರಿನಲ್ಲಿ ಬೃಹತ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಸನ್ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಯು.ಟಿ. ಖಾದ‌ರ್ ಫರೀದ್ ಅವರು ಉದ್ಘಾಟಿಸಿದರು, ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಿಂದ ಸುಮಾರು 2,000 ವಿದ್ಯಾರ್ಥಿಗಳು, ಶಾಲಾ ಮುಖ್ಯಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಮಾದಕ ವಸ್ತುಗಳ ವಿರುದ್ಧ ಪ್ರತಿಜ್ಞೆ ಸ್ವೀಕರಿಸಿದರು.

ಅಲ್ಲದೆ, ವಿವಿಧ ಇಲಾಖೆಗಳ ತಜ್ಞರು ಭಾಗವಹಿಸಿದ Panel Discussion ಮೂಲಕ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ, ವ್ಯಸನದಿಂದ ದೂರವಿರುವಂತೆ ಸಂದೇಶ ನೀಡಲಾಯಿತು.

Related posts

ಮೂಲ್ಕಿಯ ಬಪ್ಪನಾಡಿನಲ್ಲಿ ನಡೆದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಇದರ ಸಂಯೋಜನೆಯಲ್ಲಿ ಅಪ್ಪೆ ಬೇರ್‌ದ ತುಳುನಾಡ್ ರಾಷ್ಟ್ರೀಯ ವಿಚಾರ ಸಂಕೀರಣ; ಜಾತಿ ಕಟ್ಟುವ ಮೊದಲು ಕುಲಕಸುಬು ಇತ್ತು – ಜ್ಯೋತಿ ಚೆಳ್ಯಾರ್:

voiceoftulunadu

ಕಾಪು ಶ್ರೀ ಹಳೆ ಮಾರಿಯಮ್ಮಸಭಾಭವನದಲ್ಲಿ ನಡೆಯಲಿರುವ ಸ್ಪರ್ಧೆ.ಕಾಪುವಿನಲ್ಲಿ ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ;

Voiceoftulunadu

ತುಳುನಾಡಿನ ರೈಲ್ವೆ ಇತಿಹಾಸದಲ್ಲೇ ಹೊಸ ದಾಖಲೆ: ಮೆಟ್ರೋ ಮಾದರಿಯಲ್ಲಿ ಕಂಗೊಳಿಸುತ್ತಿದೆ ಬಂಟ್ವಾಳ ಸ್ಟೇಷನ್: ಪ್ರಧಾನಿ ಮೋದಿಯವರಿಂದ ಚಾಲನೆ ;

Voiceoftulunadu

Leave a Comment