September 5, 2026
Uncategorizedಕ್ರೈಮ್ಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಣಿಪಾಲ: ಮರಕ್ಕೆ ಬುಲೆಟ್ ಡಿಕ್ಕಿ ಹೊಡೆದು ಯುವಕ ಮೃತ್ಯು; ಕೆಳಪರ್ಕಳ ಡೌನ್‌ನ ಗೋಪಾಲಕೃಷ್ಣ ದೇವಸ್ಥಾನದ ಬಳಿ ಘಟನೆ ;

ವರದಿ /ಚಿತ್ರ : ವಿನೋದ್ ಶೆಟ್ಟಿ

ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್‌ನಲ್ಲಿ ಸೋಮವಾರ ತಡರಾತ್ರಿ ನಡೆದಿದೆ.ಆತ್ರಾಡಿ ನಿವಾಸಿ ಸನತ್ (21) ಮೃತಪಟ್ಟವರು.

ಅವರು ಮಣಿಪಾಲದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.ಸನತ್ ಅವರು ಸ್ನೇಹಿತರೊಂದಿಗೆ ಮಣಿಪಾಲಕ್ಕೆ ಬಂದು ಊಟ ಮುಗಿಸಿ, ರಾತ್ರಿ ಸುಮಾರು 1.25ಕ್ಕೆ ಸ್ನೇಹಿತನಿಗೆ ಸೇರಿದ KA-20-EP-5934 ನೋಂದಣಿ ಸಂಖ್ಯೆಯ ಬುಲೆಟ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು.

ಈ ವೇಳೆ ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್‌ನ ಗೋಪಾಲಕೃಷ್ಣ ದೇವಸ್ಥಾನದ ಬಳಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಡಿಕ್ಕಿಯ ರಭಸಕ್ಕೆ ಸನತ್ ಬೈಕ್ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟಿದ್ದು, ತಲೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದವು.

ತಕ್ಷಣ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ತುಳುನಾಡಿನ ಪ್ರಸಿದ್ಧ ದೈವ ನರ್ತಕ ಕುಕ್ಕೆಹಳ್ಳಿ ಸೋಮು ಪಾಣಾರ ದೈವಾದೀನ : ಜೂನ್.9ರಂದು ಕುಕ್ಕೆಹಳ್ಳಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರದ್ಧಾಂಜಲಿ ಸಭೆ ;

Voiceoftulunadu

ಉಜಿರೆಯ  ಎಸ್.ಡಿ.ಎಂ ಪದವಿಪೂರ್ವ ಕಾಲೇಜ್‌ನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಸಮಾರಂಭ ವಿದ್ಯಾಥಿಗಳು ಭವಿಷ್ಯದ ಬಗ್ಯೆ ಕನಸು ಕಂಡು ನನಸಾಗಿಸಬೇಕು : ಸೋನಿಯಾ ಯಶೋವರ್ಮ

Voiceoftulunadu

ತುಳುವರ ನವಗ್ರಹಗಳು – ತುಳುನಾಡಿನ ಜೀವನತತ್ವ, ಕಾಲಗಣನೆ ಮತ್ತು ಜ್ಞಾನಪರಂಪರೆಯ ಪ್ರತಿಬಿಂಬ;

voiceoftulunadu

Leave a Comment