28.5 C
ಮಂಗಳೂರು
September 4, 2026
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀ ಕ್ಷೇತ್ರ ಶಂಕರಪುರ: ಉಸಿರಿಗಾಗಿ ಹಸಿರು ಅಭಿಯಾನಕ್ಕೆ ಚಾಲನೆ:ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಕ್ಷೇತ್ರ ಶಂಕರಪುರ ಧರ್ಮಪೀಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ ಗುರೂಜಿ;

ಶಂಕರಪುರ; ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ವತಿಯಿಂದ ಉಸಿರಿಗಾಗಿ ಹಸಿರು ಅಭಿಯಾನ ಕಾರ್ಯಕ್ರಮ ಗುರವಾರ ನೆ ರವೇರಿತು.

ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಶಂಕರಪುರ ಏಕ ಜಾತಿ ಧರ್ಮಪೀಠದ ಪೀಠಾಧೀಶ್ವರ ಸಾಯಿ ಈಶ್ವರ ಗುರೂಜಿ ಉದ್ಘಾಟಿಸಿರು.

ಈ ಸಂದರ್ಭ ಶ್ರೀ ಸಾಯಿ ಈಶ್ವರ ಗುರೂಜಿ ಮಾತನಾಡಿ, ಇಂದು ಪ್ರಕೃತಿ ಹಲವಾರು ವೈರುಧ್ಯ ಗಳಿಂದ ಕೂಡಿದೆ. ಮಳೆಗಾಲದಲ್ಲಿ ಸರಿಯಾಗಿ ಮಳೆ ಬರುತ್ತಿಲ್ಲ. ಇದಕ್ಕೆಲ್ಲ ಕಾರಣ

ಪ್ರಕೃತಿಯ ನಾಶ. ಈ ನಿಟ್ಟಿನಲ್ಲಿ ಉಸಿರಿಗಾಗಿ ಹಸಿರು ಅಭಿಯಾನ ಕ್ಷೇತ್ರದ ವತಿಯಿಂದ ಪ್ರಾರಂಭಿಸಲಾಗಿದೆ. ಪ್ರತಿಯೊಬ್ಬರೂ ವರ್ಷಕ್ಕೆ ಕನಿಷ್ಠ ಒಂದು ಗಿಡವನಾದರೂ ನೆಟ್ಟು ಬೆಳೆಸುವ ಕಾರ್ಯ ನಡೆಯಬೇಕಾಗಿದೆ ಎಂದಅವರು, ಮುಂದಿನ ದಿನಗಳಲ್ಲಿ ಈ ಅಭಿಯಾನ ರಾಜ್ಯವಾಪಿ ನಡೆಯಲಿದೆ ಎಂದರು.

ಮುಖ್ಯ ಅತಿಥಿ ಸಮಾಜಕಾರ್ಯ ಉಪನ್ಯಾಸಕ ಡಾ. ಗಣೇಶ್ ಪ್ರಸಾದ್ ಜಿ ನಾಯಕ್ ಗಿಡಗಳನ್ನು ವಿತರಿಸಿ ಮಾತನಾಡಿ, ಪ್ರಕೃತಿಯನ್ನು ಉಳಿಸಿದರೆ ಮಾತ್ರ ಜೀವಸಂಕುಲ ಉಳಿಯಬಹುದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಿಡ ನೆಟ್ಟು

ಬೆಳೆಸುವ ಕಾರ್ಯ ಮಾಡಬೇಕು. ಶ್ರೀ ಕ್ಷೇತ್ರದ ವತಿಯಿಂದ ನಡೆಯುವ ಈ ಯೋಜನೆ ಅಪೂರ್ವವಾಗಿದೆ ಎಂದರು.

ವೇದಿಕೆಯಲ್ಲಿ ಮಂದಿರದ ಟ್ರಸ್ಟಿ ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ರಾಮಪ್ಪ ಪೂಜಾರಿ ಸಂತೆಕಟ್ಟೆ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಭಕ್ತರಿಗೆ ವಿವಿಧ ಜಾತಿಯ ಗಿಡಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಸಂಯೋಜಕ, ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿ, ವಂದಿಸಿದರು.

Related posts

ಅಹಮದಾಬಾದ್-ಮಂಗಳೂರು ಜಂಕ್ಷನ್-ಅಹಮದಾಬಾದ್ ರೈಲುಯಾನ‘ವೀಕ್ಲಿ ಟ್ರೈನ್ ಆನ್ ಡಿಮ್ಯಾಂಡ್’ ವಿಶೇಷ ರೈಲು ಸಂಚಾರ ಅವಧಿ ವಿಸ್ತಾರ;

Voiceoftulunadu

ಶ್ರೀರಸ್ತು ಸೌಹಾರ್ದ ಸೊಸೈಟಿ ವತಿಯಿಂದ ಮಕ್ಕಳಿಗಾಗಿ ಸಹಕಾರ ಧ್ವಜ ಚಿತ್ರ ಬಿಡಿಸುವ ಸ್ಪರ್ಧೆ;

Voiceoftulunadu

ಕಾಪು ಬಿಜೆಪಿ ಮಹಿಳಾ ಮೋರ್ಚಾ, ಹಿರಿಯಡ್ಕ ಶಕ್ತಿ ಕೇಂದ್ರದ ವತಿಯಿಂದ ಸ್ವಚ್ಚತಾ ಕಾರ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ;

Voiceoftulunadu

Leave a Comment