28.5 C
ಮಂಗಳೂರು
September 4, 2026
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಹೆಜಮಾಡಿ-ಪಡುಬಿದ್ರಿ ಟೋಲ್ ಸಮಸ್ಯೆ: ರಾಜ್ಯ ಸರ್ಕಾರದ ಗಮನಕ್ಕೆ ಮಾಜಿ ಸಚಿವ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗದಿಂದ ಆರೋಗ್ಯ ಸಚಿವ ಯು.ಟಿ. ಖಾದರ್ ಗೆ ಮನವಿ;

ವರದಿ /ಚಿತ್ರ :ಈ ಮೀಡಿಯಾ

ಬೆಂಗಳೂರು, ಆ. 4: ಹೆಜಮಾಡಿ ಹಾಗೂ ಪಡುಬಿದ್ರಿ ಭಾಗದ ಜನರನ್ನು ಕಾಡುತ್ತಿರುವ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ, ಬೆಂಗಳೂರಿನ ಸಚಿವರ ಕಚೇರಿಯಲ್ಲಿ ಕರ್ನಾಟಕ ಆರೋಗ್ಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಯು.ಟಿ. ಖಾದರ್ ಅವರನ್ನು ಕಾಂಗ್ರೆಸ್ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯಲ್ಲಿ, ಹೆಜಮಾಡಿ ಮತ್ತು ಪಡುಬಿದ್ರಿ ಭಾಗದ ಸಾರ್ವಜನಿಕರು ಟೋಲ್ ಸಂಗ್ರಹಣೆಯಿಂದ ಎದುರಿಸುತ್ತಿರುವ ಸಮಸ್ಯೆಗಳನ್ನುಸಚಿವರ ಗಮನಕ್ಕೆ ತರಲಾಯಿತು. ಸ್ಥಳೀಯ ನಿವಾಸಿಗಳಿಗೆ ಶಾಶ್ವತ ಟೋಲ್ ವಿನಾಯಿತಿ, ಜನಸ್ನೇಹಿ ವ್ಯವಸ್ಥೆ ಹಾಗೂ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಅಧ್ಯಕ್ಷರಾದ ವೈ. ಸುಕುಮಾರ್, ಕೆಪಿಸಿಸಿ ಕೋಆರ್ಡಿನೇಟರ್‌ಗಳಾದ ನವೀನ್ ಚಂದ್ರ ಜೆ. ಶೆಟ್ಟಿ ಹಾಗೂ ಅಬ್ದುಲ್ ಅಜೀಜ್ ಹೆಜಮಾಡಿ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪ್ರಭೋದ್ ಚಂದ್ರ ಹೆಜಮಾಡಿ, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೀಜ್ ಹುಸೇನ್, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ನಿಯಾಜ್ ಹಾಗೂ ಕಾಪುಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೇಶವ್ ಸಿ. ಸಾಲ್ಯಾನ್ ಉಪಸ್ಥಿತರಿದ್ದರು.

ನಿಯೋಗವು ಹೆಜಮಾಡಿ-ಪಡುಬಿದ್ರಿ ಭಾಗದ ಜನರ ನ್ಯಾಯಸಮ್ಮತ ಬೇಡಿಕೆಗಳನ್ನು ಸಚಿವರ ಮುಂದಿಟ್ಟು, ಸಮಸ್ಯೆಗೆ ಶೀಘ್ರ ಹಾಗೂ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿತು.ಸಚಿವರು ಮನವಿಯನ್ನು ಸ್ವೀಕರಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ಜನರ ಹಕ್ಕಿಗಾಗಿ ಕಾಂಗ್ರೆಸ್ ಹೋರಾಟ ನಿರಂತರವಾಗಿದ್ದು, ನ್ಯಾಯ ದೊರೆಯುವವರೆಗೆ ಈ ಹೋರಾಟ ಮುಂದುವರಿಯಲಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.

Related posts

ಪಡುಬಿದ್ರಿ ಬಂಟರ ಸಂಘದ ಆಯೋಜನೆಯಲ್ಲಿ “ಪಡ್ಡೆದ್ರ ಬಂಟೆರ್ನ ಕೆಸರ್ದ ಗೊಬ್ಬು”:ಕಾರ್ಯಕ್ರಮ ಉದ್ಘಾಟಿಸಿದ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ;

Voiceoftulunadu

ಕೊಳಲಗಿರಿ “ಹಡಿಲು ಭೂಮಿ ಕೃಷಿ”ಗೆ ಚಾಲನೆ : “ಕೆಸರ್ಡ್ ಒಂಜಿ ದಿನ” ಸಂಭ್ರಮ;

Voiceoftulunadu

ಪುಸ್ತಕದ ಸಂಸ್ಕೃತಿ ಮಸ್ತಕದ ಸಂಸ್ಕೃತಿಯಾಗಬೇಕಾಗಿದೆ : ಡಾ. ಮಾನಸ ಪತ್ರಕರ್ತ ಜನಾರ್ದನ ಕೊಡವೂರು, ಲೇಖಕಿ ಪೂರ್ಣಿಮಾ ಜನಾರ್ದನ್ ದಂಪತಿಗಳಿಗೆ ಸನ್ಮಾನ;

Voiceoftulunadu

Leave a Comment