28.5 C
ಮಂಗಳೂರು
September 4, 2026
Uncategorizedಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸ್ಥಳೀಯ/ಪ್ರಾದೇಶಿಕ ಸುದ್ದಿ

ಹೆಬ್ರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ :ಕಾಂಗ್ರೆಸ್‌ ಕಾಂಗ್ರೆಸ್‌ ಮುಖಂಡರಿಂದ ಅಹವಾಲು ಸ್ವೀಕರಿಸಿದ ಸಚಿವರು;

ವರದಿ /ಚಿತ್ರ :ಈ ಮೀಡಿಯಾ

ಹೆಬ್ರಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ಬುಧವಾರ ಹೆಬ್ರಿಗೆ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿ, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ, ಅಹವಾಲು ಸ್ವೀಕರಿಸಿದರು.ಉಡುಪಿ ತೀರ್ಥಹಳ್ಳಿ – ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಮತ್ತು ಹೆಬ್ರಿಯ ಪ್ರಮುಖ ಬಸ್ ನಿಲ್ದಾಣದ ಕಾಮಗಾರಿ ಪೂರ್ಣಗೊಳಿಸಲು ಸ್ಥಳೀಯರಿಂದ ಸಚಿವರಿಗೆ ಮನವಿ ನೀಡಲಾಯಿತು.ಈ ಸಂದರ್ಭ ಸಚಿವರು ಮಾತನಾಡಿ, ಆಗುಂಬೆ ಘಾಟಿಯ ಅಭಿವೃದ್ಧಿ ಬಗ್ಗೆ ನಾನು ಈಗಾಗಲೇ ಸ್ಥಳ ಪರಿಶೀಲಿಸಿ ಇಲ್ಲಿಗೆಇಂದು ಬಂದಿದ್ದೇನೆ. ಈ ಬಗ್ಗೆ ಇನ್ನೊಂದು ಬಾರಿ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ. ಆಗುಂಬೆ ಘಾಟಿ ವಿಸ್ತರಣೆಗೆ ಅರಣ್ಯ ಇಲಾಖೆಯ ತೊಡಕು ಇದೆ. ಇದನ್ನು ಸರಿಪಡಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಕಳ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್, ಮಹಿಳಾ ಗಟಕಧ್ಯಕ್ಷೆ ಭಾನು ಭಾಸ್ಕರ್, ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಸಹಿತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಆಸಕ್ತಿ ಮತ್ತು ವೃತ್ತಿಯ ನಡುವೆ ಸಮತೋಲನ ಅಗತ್ಯ: ಯುವಜನತೆಗೆ ನಮೃತಾ ಮೋಹನ್ ಕಿವಿಮಾತು:ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ಹಮ್ಮಿಕೊಂಡ ಕಾರ್ಯಕ್ರಮ;

Voiceoftulunadu

ಈ ಸಲನೂ ಕಪ್ ನಮ್ಧೇ! ಗೆದ್ದ RCB ಗೆ ಸಿಕ್ಕ ಬಹುಮಾನ ಎಷ್ಟು?

Voiceoftulunadu

ಸರೋವರ ಕ್ಷೇತ್ರ ಶ್ರೀ ಅನಂತಪುರ ಅನಂತಪದ್ಮನಾಭ ಸ್ವಾಮೀ ಸನ್ನಿಧಿಯಲ್ಲಿ 2027 ರ ಫೆ. 23 ರಿಂದ 28 ರ ತನಕ ನವೀಕರಣ ಬ್ರಹ್ಮಕಲಶೋತ್ಸವದೊಂದಿಗೆ ಅತ್ಯಪೂರ್ವ ತೆಪ್ಪೋತ್ಸವ;

Voiceoftulunadu

Leave a Comment