28.5 C
ಮಂಗಳೂರು
September 4, 2026
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿಯ ಡಾ. ರಾಜಲಕ್ಷ್ಮಿ ಅವರ “ವಾತ್ಸಲ್ಯದ ಒಸಗೆ” ಕೃತಿ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ : ಪ್ರಶಸ್ತಿ ಪ್ರದಾನಿಸಲಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಸುರೇಶ್‌ ಹನಗವಾಡಿ;

ವರದಿ /ಚಿತ್ರ :ಈ ಮೀಡಿಯಾ

ಉಡುಪಿ: ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆಯ ಕನ್ನಡ ವೈದ್ಯ ಬರಹಗಾರರ ಸಮಿತಿಯು ನೀಡುವ ಪ್ರತಿಷ್ಠಿತ ‘ಡಾ. ಶ್ಯಾಮ್ ಪ್ರಸಾದ್ ವಾರ್ಷಿಕ ಶ್ರೇಷ್ಠ ವೈದ್ಯಕೀಯ ಕೃತಿ ಪ್ರಶಸ್ತಿ 2025-26’ ಕ್ಕೆ ಉಡುಪಿಯ ವೈದ್ಯಕೀಯ ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿರುವ ವಾತ್ಸಲ್ಯ ಕ್ಲಿನಿಕ್ ನ ಡಾ. ರಾಜಲಕ್ಷ್ಮಿ ಅವರ “ವಾತ್ಸಲ್ಯದ ಒಸಗೆ ಮಹಿಳಾಆರೋಗ್ಯ ಸಂಗಾತಿ ಕೃತಿ ಆಯ್ಕೆಯಾಗಿದೆ.

ಭಾರತೀಯ ವೈದ್ಯಕೀಯ ಕರಾವಳಿಯ ಸಂಘ ಉಡುಪಿ ಪೂರ್ವಾಧ್ಯಕ್ಷರಾದ ವಾತ್ಸಲ್ಯ ಕ್ಲಿನಿಕ್ ನ ಡಾ. ರಾಜಲಕ್ಷ್ಮಿ ಅವರು ರೋಗಿಗಳ ಬದುಕು, ಭಾವನೆ ಮತ್ತು ಮಾನವೀಯ ಸಂಬಂಧಗಳನ್ನು ಕುರಿತಂತೆ ಬರೆದಿರುವ ಈ ಕೃತಿಯು ಓದುಗರ ಮನಮುಟ್ಟುವಂತಿದೆ .

ಆಗಸ್ಟ್ 23 ಮತ್ತು 24 ರಂದು ದೊಡ್ಡಬಳ್ಳಾಪುರದ ನವೋದಯ ಶಾಲೆಯಲ್ಲಿ ನಡೆಯಲಿರುವ ಕನ್ನಡ ವೈದ್ಯ ಬರಹಗಾರರ 6ನೇ ರಾಜ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಶಸ್ತಿಯನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಸುರೇಶ್ ಹನಗವಾಡಿಯವರು ಪ್ರದಾನಿಸಲಿದ್ದಾರೆ. .

Related posts

ರಾಜ್ಯ ಸಭಾ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ: ಉಪರಾಷ್ಟ್ರಪತಿ ಕಚೇರಿಯಲ್ಲಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ ಖರ್ಗೆ;

Voiceoftulunadu

ದ್ವೇಷ ಭಾಷಣ: ಉಡುಪಿ ಶಾಸಕ ಯತ್ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ದ್ವೇಷ ಭಾಷಣ;

Voiceoftulunadu

ನೂತನ ಸಿಎಂ ಡಿಕೆ ಶಿವಕುಮಾರ್ ಭರ್ಜರಿ ಕೊಡುಗೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಯುವ ಸಂಘಗಳಿಗೆ ತಲಾ 10 ಲಕ್ಷ ರೂ. ಅನುದಾನ!

Voiceoftulunadu

Leave a Comment