28.5 C
ಮಂಗಳೂರು
September 4, 2026
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉದ್ಯಮಿ, ಧಾರ್ಮಿಕ-ಸಾಮಾಜಿಕ ಮುಖಂಡ ಸಖೇಂದ್ರ ಸುವರ್ಣ ಹೃದಯಾಘಾತದಿಂದ ನಿಧನ ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು;

ವರದಿ /ಚಿತ್ರ :ಈ ಮೀಡಿಯಾ

ಕಾಪು, ಜು. 28: ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷ, ಉದ್ಯಮಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡ ಸಖೇಂದ್ರ ಬಿ. ಸುವರ್ಣ (69) ಅವರು ಮಂಗಳವಾರ ಬೆಳಗ್ಗಿನ ಜಾವ ಹೃದಯಾಘಾತದಿಂದ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಸಹೋದರರಾದ ಗಂಗಾಧರ ಸುವರ್ಣ, ಕಮಲಾಕ್ಷ ಸುವರ್ಣ ಸೇರಿದಂತೆ ಐದು ಮಂದಿ ಸಹೋದರಿಯರನ್ನು ಅಗಲಿದ್ದಾರೆ.

ಸಖೇಂದ್ರ ಸುವರ್ಣ ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷರಾಗಿ, ಮಹತೋಭಾರ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನ ಮತ್ತು ಶ್ರೀ ಮೂರನೇ ಮಾರಿಯಮ್ಮ ದೇವಸ್ಥಾನದ ಮೊಕ್ತಸರರಾಗಿ, ಕಾಪು ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.ಕಾಪು ಸಾರ್ವಜನಿಕ ಗಣೇಶೋತ್ಸವ ಸಮಿತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಸಖೇಂದ್ರ ಸುವರ್ಣ ಅವರ ನಿಧನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Related posts

ಪುತ್ತೂರಿನ ಕುಕ್ಕಿನಡ್ಕ ಸುಬ್ರಾಯ ದೇವಸ್ಥಾನದಲ್ಲಿ ವನಮಹೋತ್ಸವ ;

Voiceoftulunadu

ಚಾರ್ಮಾಡಿ ಘಾಟಿಯಲ್ಲಿ ಕಂಡು ಬಂದ ಒಂಟಿ ಸಲಗ: ರಸ್ತೆ ದಾಟುತ್ತಿದ್ದ ಸಲಗ ಮೊಬೈಲ್ ನಲ್ಲಿ ಸೆರೆ ;

Voiceoftulunadu

ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ.ದಸರಾ ಸಮಿತಿಯ ಪೂರ್ವಬಾವಿ ಸಭೆಯಲ್ಲಿ ನಾಡೋಜ ಡಾ. ಜಿ. ಶಂಕರ್ ಹೇಳಿಕೆ;

Voiceoftulunadu

Leave a Comment