27 C
ಮಂಗಳೂರು
July 6, 2026
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರಿಂದ ಬೆಳ್ತಂಗಡಿಯಲ್ಲಿನ ಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಸಮಾರಂಭ:

ಬೆಳ್ತಂಗಡಿ : ಕರ್ನಾಟಕ ಕರಾವಳಿಯ ಬೆಳ್ತಂಗಡಿಯಲ್ಲಿ ನಿರ್ಮಾಣ ಗೊಂಡಿರುವ ಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಸಮಾರಂಭವು ನಾಳೆ ಭಾನುವಾರ (ಮೇ.೩೧) ಅಮೃತವರ್ಷಿಣಿ ಸಭಾಭವನ, ಧರ್ಮಸ್ಥಳ ಇಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಉದ್ಘಾಟಿಸಲಿದ್ದಾರೆ.

ಬೆಳಗ್ಗೆ 11:00 ಗಂಟೆಗೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ (ರಿ.) ಇದರ ಅಧ್ಯಕ್ಷ ಡಾ| ಡಿ.ವೀರೇಂದ್ರ ಹೆಗ್ಗಡೆ ಗೌರವ ಉಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭವು ನೆರವೇರಲಿದೆ.ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ರಾಜ್ಯಸಭೆ (ದೆಹಲಿ) ಇದರ ಕಾರ್ಯದರ್ಶಿ ಡಾ| ಕೆ.ಎಸ್ ಸೋಮಶೇಖರ್, ಬೆಳ್ತಂಗಡಿ ವಿಧಾನಸಭಾ ಸದಸ್ಯ ಹರೀಶ್ ಪೂಂಜ, ಸಿರಿ (ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ) ಸಂಸ್ಥಾಪಕಿ ಹಾಗೂ ಜ್ಞಾನವಿಕಾಸ ಕಾರ್ಯಕ್ರಮ, ಧರ್ಮಸ್ಥಳ ಇದರ ಅಧ್ಯಕ್ಷೆ ಹೇಮಾವತಿ ವೀ.ಹೆಗ್ಗಡೆ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ (ರಿ.) ಉಜಿರೆ ಇದರ ಉಪಾಧ್ಯಕ್ಷ ಡಿ.ಸುರೇಂದ್ರ ಕುಮಾರ್ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.ಆ ನಿಮಿತ್ತ ಬೆಳ್ತಂಗಡಿ ಇಲ್ಲಿನ ರೆಂಕೆದಗುತ್ತು ಇಲ್ಲಿನ ಸಿರಿ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ ಮತ್ತು ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಸದಸ್ಯರು ಹಾಗೂ ಸಿರಿ ಸಿಬ್ಬಂದಿಗಳು ಈ ಕಾರ್ಯಕ್ರಮಕ್ಕೆ ಹೃತ್ಪೂರ್ವಕವಾಗಿ ಆಹ್ವಾನಿಸಿದ್ದಾರೆ.

Related posts

ಇನ್ನು ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಹಾಜರಾಗುವಂತೆ ಸಿಎಸ್ ಆದೇಶ

voiceoftulunadu

ನೂತನ ಸಿಎಂ ಡಿಕೆ ಶಿವಕುಮಾರ್ ಭರ್ಜರಿ ಕೊಡುಗೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಯುವ ಸಂಘಗಳಿಗೆ ತಲಾ 10 ಲಕ್ಷ ರೂ. ಅನುದಾನ!

Voiceoftulunadu

ಧವಳತ್ರಯ ಜೈನ ಕಾಶಿ – ಪುಸ್ತಕ ವಿತರಣೆ NEWSಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜ್‌ನ ವಿದ್ಯಾಥಿಗಳಿಗೆ ಪುಸ್ತಕಗಳ ವಿತರಣೆಶಿಕ್ಷಣದ ಮಹತ್ವ ಅರಿತು ಬದುಕು ರೂಪಿಸಿರಿ : ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ:

voiceoftulunadu

Leave a Comment