27 C
ಮಂಗಳೂರು
July 6, 2026
Uncategorizedಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶವಿಶೇಷ ಅಂಕಣ

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್; ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ :

ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ದೊಡ್ಡ ಆಲಹಳ್ಳಿ ಕೆಂಪೇಗೌಡ ಶಿವಕುಮಾರ್ (DK Shivakumar) ಅವರು ಕರ್ನಾಟಕದ (Karnataka) ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.ಸಂವಿಧಾನದ ಪುಸ್ತಕ ಹಿಡಿದ ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿಕೆ ಶಿವಕುಮಾರ್ ನೆಲಕ್ಕೆ ಅಡ್ಡಬಿದ್ದು ನಮಸ್ಕರಿಸಿದರು.ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು.ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ಅವರು ತಮ್ಮ ಪ್ರಮಾಣವಚನವನ್ನು ದೆಹಲಿಯ ಹೈ ಕಮಾಂಡ್ ಸಭೆಗಳು ಮತ್ತು ರಾಜ್ಯ ರಾಜಕೀಯ ಬೆಳವಣಿಗೆಗಳ ನಂತರ ಪೂರ್ಣಗೊಳಿಸಿದರು. ಇವರ ಸಂಪುಟದಲ್ಲಿ 13 ಶಾಸಕರು ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೊದಲು ಡಿ ಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ಈ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ, ಕೆಸಿ ವೇಣುಗೋಪಾಲ್, ತೆಲಂಗಾಣ ಮುಖ್ಯಮಂತ್ರಿ ಸತೀಶನ್, ಹೈಕೋರ್ಟ್ ಚೀಫ್ ಜಸ್ಟೀಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.ಸಮಾರಂಭದಲ್ಲಿ ಜಿ ಪರಮೇಶ್ವರ್ ಅವರು ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂಧರ್ಭದಲ್ಲಿ 12 ಮಂದಿ ಪ್ರಮಾಣ ವಚನ ಸ್ವೀಕರಿಸಿದರು.

Related posts

ಪ್ರಧಾನಿ ನರೇಂದ್ರ ಮೋದಿಯವರ 4,399 ದಿನಗಳ ಯಶಸ್ವಿ ಆಡಳಿತ ನಿರ್ವಹಣೆಯ ಹಿನ್ನೆಲೆ; ಬಿಜೆಪಿ ಮಂಗಳೂರು ನಗರ ಮಂಡಲದ ವತಿಯಿಂದ ಶ್ರೀ ಕ್ಷೇತ್ರ ಕದ್ರಿಯಲ್ಲಿ ವಿಶೇಷ ರಂಗ ಪೂಜೆ:

voiceoftulunadu

ಸರಪಾಡಿ ಅಶೋಕ ಶೆಟ್ಟಿ;ರಂಗದ ಬೆಳಕಿನ ಹಿಂದಿನ ಕತ್ತಲೆಯ ಬದುಕು, ಒಬ್ಬ ಅಪ್ರತಿಮ ಯಕ್ಷಗಾನ ಕಲಾವಿದನ ಯಶೋಗಾಥೆ:

Voiceoftulunadu

ಶ್ರೀ ಕ್ಷೇತ್ರ ಶಂಕರಪುರ: ಉಸಿರಿಗಾಗಿ ಹಸಿರು ಅಭಿಯಾನಕ್ಕೆ ಚಾಲನೆ:ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಕ್ಷೇತ್ರ ಶಂಕರಪುರ ಧರ್ಮಪೀಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ ಗುರೂಜಿ;

Voiceoftulunadu

Leave a Comment