July 7, 2026
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಸ್ಥಳೀಯ/ಪ್ರಾದೇಶಿಕ ಸುದ್ದಿ

ಕೊಲ್ಲೂರು: ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ₹80 ಸಾವಿರ ಕಳವು: 24 ಗಂಟೆಯೊಳಗೆ ಮೂವರು ಅಂತರ್ ಜಿಲ್ಲಾ ಕಳ್ಳಿಯರ ಬಂಧನ;

ವರದಿ/ ಚಿತ್ರ :ವಿನೋದ್ ಶೆಟ್ಟಿ ಉಡುಪಿ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ಕಳವು ಮಾಡಿದ ಆರೋಪದಡಿ ಮೂವರು ಮಹಿಳೆಯರನ್ನು ಕೊಲ್ಲೂರು ಪೊಲೀಸರು ಪ್ರಕರಣ ದಾಖಲಾದ 24 ಗಂಟೆಯೊಳಗೆ ಬಂಧಿಸಿದ್ದಾರೆ.ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿಗಳಾದ ನೇತ್ರಾವತಿ (33), ಶಾರದ (50) ಹಾಗೂ ದುರ್ಗಮ್ಮ (44) ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ನಿಮಿಶಾ ಹಾಗೂ ಅವರ ಪತಿ ಪ್ರಜೋಶ್ ಅವರು ಜುಲೈ 5ರಂದು ದೇವಸ್ಥಾನದಲ್ಲಿ ದೇವರ ದರ್ಶನ ಮುಗಿಸಿ ಹೊರಾಂಗಣಕ್ಕೆ ಬಂದಾಗ, ರಾತ್ರಿ ಸುಮಾರು 8.20ಕ್ಕೆ ವ್ಯಾನಿಟಿ ಬ್ಯಾಗ್ ಪರಿಶೀಲಿಸಿದ ವೇಳೆ ಅದರ ಜಿಪ್ ತೆರೆದಿದ್ದು, ಒಳಗಿದ್ದ ₹80 ಸಾವಿರ ನಗದು ಹೊಂದಿದ್ದ ಪರ್ಸ್ ಕಳವಾಗಿರುವುದು ಗೊತ್ತಾಯಿತು.

ದೇವಸ್ಥಾನದ ಸುತ್ತಮುತ್ತ ಹುಡುಕಿದರೂ ಪರ್ಸ್ ಪತ್ತೆಯಾಗದ ಹಿನ್ನೆಲೆಯಲ್ಲಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 303(2)ರಡಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರ ತಂಡದ ಸಹಾಯದಿಂದ ಸಿಸಿಟಿವಿ ದೃಶ್ಯಾವಳಿ, ಸಾರ್ವಜನಿಕರು ತೆಗೆದ ಛಾಯಾಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿಯ ನೆರವಿನಿಂದ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದೆ.

Related posts

ಉಡುಪಿ ಪ್ರಕೃತಿ ಲಯನ್ಸ್ ಕ್ಲಬ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ.ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಶೀರೂರು ಆಯ್ಕೆ;

Voiceoftulunadu

ರಾಷ್ಟ್ರೀಕೃತ ಬ್ಯಾಂಕಿಗೆ ಸಮಾನವಾಗಿ ಸಹಕಾರಿ ಸಂಘ ದೇವಿಪ್ರಸಾದ್ ಶೆಟ್ಟಿ;

Voiceoftulunadu

ಬಿಜೆಪಿಯ ವಿರುದ್ಧ ಹೋರಾಡಲು ಮಹಿಳೆಯರು ಸಂಘಟಿತರಾಗೋಣ :ವಿಲ್ಮಾ ಡಿಕೋಸ್ಟ;

Voiceoftulunadu

Leave a Comment