
ಮಂಗಳೂರು : ಮಹಾನಗರ ಪಾಲಿಕೆ ಕಚೇರಿ ಕಟ್ಟಡ, ಕುದ್ಮುಲ್ ರಂಗರಾವ್ ಪುರಭವನ ಸೇರಿದಂತೆ ಪ್ರಮುಖ ಸರ್ಕಾರಿ ಕಟ್ಟಡಗಳು, ವಾಣಿಜ್ಯ ಸಂಕೀರ್ಣಗಳು ಹಾಗೂ ಬ್ಯಾಂಕ್ಗಳು ವಿದ್ಯುತ್ ದೀಪಗಳ ಅಲಂಕಾರದಿಂದ ಕಂಗೊಳಿಸುತ್ತಿವೆ.
ದಸರಾ ಸಂಭ್ರಮದ ಸಂದರ್ಭದಲ್ಲಿ ನಗರದ ವಿವಿಧ ರಸ್ತೆಗಳು ಹಾಗೂ ದೇವಾಲಯಗಳಲ್ಲಿನ ವಿದ್ಯುತ್ ದೀಪಗಳ ಅಲಂಕಾರವನ್ನು ವೀಕ್ಷಿಸಲು ಪ್ರವಾಸಿಗರು ಸೇರಿದಂತೆ ಅಪಾರ ಸಂಖ್ಯೆಯ ಜನರು ಮಂಗಳೂರಿನ ಬೀದಿಗಳಲ್ಲಿ ಸಂಚರಿಸುತ್ತಿದ್ದಾರೆ.
ದಸರಾ ದಿನಗಳಲ್ಲಿ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಗರದ ಬಹುತೇಕ ರಸ್ತೆಗಳು ಜನಸಂದಣಿಯಿಂದ ತುಂಬಿರುತ್ತವೆ.
ಜನರು ಬೀದಿ ಬದಿಯ ಆಹಾರ ಪದಾರ್ಥಗಳು ಹಾಗೂ ಪಾನೀಯಗಳನ್ನು ಸವಿಯುತ್ತಾ ದಸರಾ ಸಂಭ್ರಮವನ್ನು ಆನಂದಿಸುತ್ತಿದ್ದಾರೆ.ದಸರಾ 2026ರ ಪ್ರಯುಕ್ತ ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.

ದಸರಾ 2026ರ ಪ್ರಯುಕ್ತ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಕಟ್ಟಡವು ವಿದ್ಯುತ್ ದೀಪಗಳ ಅಲಂಕಾರದಿಂದ ಕಂಗೊಳಿಸುತ್ತಿರುವ ದೃಶ್ಯ.

ದಸರಾ 2026ರ ಪ್ರಯುಕ್ತ ಮಂಗಳೂರಿನಲ್ಲಿ ಹುಲಿವೇಷ ತಂಡವೊಂದು ಅಳವಡಿಸಿರುವ ಜಾಹೀರಾತು ಫಲಕ.

ದಸರಾ 2026ರ ಪ್ರಯುಕ್ತ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರವು ವಿದ್ಯುತ್ ದೀಪಗಳ ಅಲಂಕಾರದಿಂದ ಕಂಗೊಳಿಸುತ್ತಿರುವ ದೃಶ್ಯ.
