ವರದಿ/ ಚಿತ್ರ: ಈ ಮೀಡಿಯಾ
ಕಾಪು : 2025-26 ಸಾಲಿನಲ್ಲಿ ಸಮುದಾಯ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಮಾಡುವಲ್ಲಿ ಕಾಪು ಯೋಜನಾ ಕಚೇರಿಯು ಕರ್ನಾಟಕ ರಾಜ್ಯದ 254 ಯೋಜನಾಕಚೇರಿಗಳಲ್ಲಿ ದ್ವಿತೀಯ ಸ್ಥಾನ ಪಡೆದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಡೆಯವರು ಶ್ರೀ ಕ್ಷೇತ್ರದಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಗಾರದಲ್ಲಿ ಧರ್ಮಸ್ಥಳಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಿದ್ದಾರೆ.
