September 4, 2026
Uncategorizedಆರೋಗ್ಯಕ್ರೈಮ್ಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿಯವರಿಗೆ ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯ ಡಾ. ಮಹೇಂದ್ರ ಶೆಟ್ಟಿ ಹಲ್ಲೆ : ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲು;

ವರದಿ /ಚಿತ್ರ :ಈ ಮೀಡಿಯಾ

ಕುಂದಾಪುರ : ಕುಂದಾಪುರ ತಾಲೂಕು ಕಾರ್ಯನಿರತಪತ್ರಕರ್ತರ ಸಂಘದ ಸದಸ್ಯ, ಕನ್ನಡಪ್ರಭ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಇವರ ಮೇಲೆ ಇಂದು ಬೆಳಗ್ಗೆ ಶೆರೋನ್ ಹೋಟೆಲ್ ಬಳಿ ಡಾ. ಮಹೇಂದ್ರ ಶೆಟ್ಟಿ ಅವರು ಹಲ್ಲೆ ಮಾಡಿದ್ದು, ಶ್ರೀಕಾಂತ್ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.ಕುಂದಾಪುರ ಸರಕಾರಿ ಆಸ್ಪತ್ರೆಯ ವರದಿಗೆ ಸಂಬಂಧಿಸಿ ಅಲ್ಲಿನ ವೈದ್ಯಾಧಿಕಾರಿಯಾಗಿದ್ದ ಡಾ. ಮಹೇಂದ್ರ ಶೆಟ್ಟಿ, ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ.

ಈ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, ಆರೋಪಿ ವಿರುದ್ಧ ಕಠಿಣ ಕಾನೂನುಕ್ರಮ ಜರಗಿಸಬೇಕು ಎಂದು ಕಾರ್ಯನಿರತ ಪತ್ರಕರ್ತರಸಂಘದಿಂದ ಆಗ್ರಹಿಸಿದ್ದಾರೆ.ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪ್ರಜ್ವಲ್ ರೇವಣ್ಣ ಜೈಲಲ್ಲಿ ಫೋನ್ನಲ್ಲಿ ಮಾತಾಡೋ ವಿಡಿಯೋ ವೈರಲ್ಭದ್ರತಾ ಲೋಪದ ಬಗ್ಗೆ ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾ‌ರ್ ಅಸಮಧಾನ ;

Voiceoftulunadu

ಮೂಲ್ಕಿಯಲ್ಲಿ ಕೋಸ್ಟಲ್ ಫಿಲಂ ಅವಾಡ್ಸ್೯ 2026 ಗೆ ಚಾಲನೆ ; ತುಳು ಸಿನಿಮಾ ಬೆಳವಣಿಗೆಗೆ ಕೋಸ್ಟಲ್ ಅವಾಡ್೯ ಪ್ರೇರಣೆ:

voiceoftulunadu

ಕೊಂಕಣಿ ಭಾಷಾ ಮಂಡಳ್ ಮಹಾರಾಷ್ಟ್ರದ 84ನೇ ವಾರ್ಷಿಕೋತ್ಸವ ಹಾಗೂ 34ನೇ ಕೊಂಕಣಿ ಮಾನ್ಯತಾ ದಿನಾಚರಣೆ ;

Voiceoftulunadu

Leave a Comment