November 3, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಶಿಕ್ಷಣ ಕ್ಷೇತ್ರದಲ್ಲಿ ಡಾ.ರಾಧಾಕೃಷ್ಣನ್ ಅವರ ಕೊಡುಗೆ ಸ್ಮರಿಸಿ ಪುಷ್ಪ ನಮನ ಸಲ್ಲಿಸಿದ ಆಡಳಿತ ಮಂಡಳಿ ;

ಬಂಟಕಲ್ : ಶ್ರೀ ಮಧ್ವ ವಾದಿರಾಜತಾಂತ್ರಿಕ ಮಹಾವಿದ್ಯಾಲಯದಲ್ಲಿ ಡಾ. ಸರ್ವೇಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಶಿಕ್ಷಣ ಕ್ಷೇತ್ರಕ್ಕೆ ಡಾ. ರಾಧಾಕೃಷ್ಣನ್ ಅವರ ಕೊಡುಗೆಯನ್ನು ಸ್ಮರಿಸಿ ಪುಷ್ಪ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಾಜಿ ಕುಲಸಚಿವರು ಹಾಗೂ ಎನ್‌ಐಟಿಕೆ ಸುರತ್ಕಲ್ನ ಮಾಜಿ ನಿರ್ದೇಶಕರಾದ ಡಾ. ಎಚ್ ವಿ ಸುಧಾಕರ್ ನಾಯಕ್ ಅವರುಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಅವರು ಮಾತನಾಡಿ, ವಿದ್ಯಾರ್ಥಿಗಳ ಮೇಲೆ ದೀರ್ಘಕಾಲದ ಸಕಾರಾತ್ಮಕ ಪ್ರಭಾವ ಬೀರುವುದು ಶಿಕ್ಷಕರ ನಿಜವಾದ ಸಾಧನೆಯಾಗಿದೆ. ಶಿಕ್ಷಕರು ಕರುಣೆ, ಸಹಾನುಭೂತಿ ಮತ್ತು ಉತ್ತಮ ಮೌಲ್ಯಗಳೊಂದಿಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು ಎಂದರು.ಶ್ರೀ ಸೋದೆ ಶಿಕ್ಷಣ ಸಮೂಹ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್. ಐತಾಳ್ ಅವರು ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯವನ್ನು ತಿಳಿಸಿದರು.

ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾ‌ರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶಿಕ್ಷಣ ಸಂಸ್ಥೆಯ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರದ ಬಗ್ಗೆ ವಿವರಿಸಿದರು.ಹಾಗೂ ಪ್ರಾಂಶುಪಾಲರಾದ ಡಾ. ನಾಗರಾಜ ಭಟ್ ಅವರು ಸ್ವಾಗತಿಸಿ, ವಿದ್ಯಾರ್ಥಿಗಳು ಸಮಾಜದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಮಹತ್ವದ ಪಾತ್ರದ ಬಗ್ಗೆ ವಿವರಿಸಿದರು.ಕಾರ್ಯಕ್ರಮದಲ್ಲಿ ಡೀನ್ಗಳು, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಪ್ರಧಾನಿ ನರೇಂದ್ರ ಮೋದಿಯವರ 4,399 ದಿನಗಳ ಯಶಸ್ವಿ ಆಡಳಿತ ನಿರ್ವಹಣೆಯ ಹಿನ್ನೆಲೆ; ಬಿಜೆಪಿ ಮಂಗಳೂರು ನಗರ ಮಂಡಲದ ವತಿಯಿಂದ ಶ್ರೀ ಕ್ಷೇತ್ರ ಕದ್ರಿಯಲ್ಲಿ ವಿಶೇಷ ರಂಗ ಪೂಜೆ:

voiceoftulunadu

ಶಿರ್ಲಾಲು: ಭಾರತೀಯ ಜೈನ್ ಮಿಲನ್ ವತಿಯಿಂದ ಆಹಾರೋತ್ಸವ ಹಾಗೂ ವಿದ್ಯಾರ್ಥಿ ವೇತನ ವಿತರಣೆ ;

Voiceoftulunadu

ಕಟಪಾಡಿ: ಅಚ್ಚಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ LKG ತರಗತಿ ಉದ್ಘಾಟನೆ ತರಗತಿ ಉದ್ಘಾಟಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ

Voiceoftulunadu

Leave a Comment