September 5, 2026
Uncategorizedರಾಜ್ಯ/ದೇಶಸಾಮಾಜಿಕ/ಇತಿಹಾಸ

ಬೆಂಗಳೂರಿನಲ್ಲಿ ಭಾರತದ ಮೊದಲ ಬೀದಿನಾಯಿ ಶೆಲ್ಟರ್ ನಿರ್ಮಾಣ;

ಬೆಂಗಳೂರು: ಸುಪ್ರೀಂ ಕೋರ್ಟ್ (Supreme Court) ನಿರ್ದೇಶನದ ಬಳಿಕ ಮೊದಲ ಬಾರಿಗೆ ಬೆಂಗಳೂರಿನಲ್ಲಿ (Bengaluru) ಡಾಗ್ ಶೆಲ್ಟರ್ (Dog Shelter) ನಿರ್ಮಾಣ ಆಗಿದೆ. ಉತ್ತರ ನಗರ ಪಾಲಿಕೆಯ ಮೇಡಿ ಅಗ್ರಹಾರದಲ್ಲಿ ಡಾಗ್ ಶೆಲ್ಟರ್ ನಿರ್ಮಾಣ ಆಗಿದ್ದು, 500 ನಾಯಿಗಳಿಗೆ ಆಶ್ರಯ ನೀಡುವ ಸಾಮರ್ಥ್ಯ ಹೊಂದಿದೆ.

ಬೀದಿನಾಯಿಗಳಿಗೆ ಶೆಲ್ಟರ್ ನಿರ್ಮಾಣ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ಮಾಡಿತ್ತು. ಕೋರ್ಟ್ ನಿರ್ದೇಶನದ ಬಳಿಕ ಇದೇ ಮೊದಲ ಬಾರಿಗೆ ಪ್ರಥಮ ಡಾಗ್ ಶೆಲ್ಟರ್ ಬೆಂಗಳೂರು ಉತ್ತರ ನಗರ ಪಾಲಿಕೆಯ ಮೇಡಿ ಅಗ್ರಹಾರದಲ್ಲಿ ನಿರ್ಮಾಣ ಮಾಡಲಾಗಿದೆ. 2 ಕೋಟಿ ವೆಚ್ಚದಲ್ಲಿ 500ನಾಯಿಗಳಿಗೆ ಆಶ್ರಯ ನೀಡುವ 25 ಬ್ಯಾರಕ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಪ್ರತಿ ಬ್ಯಾರಕ್‌ನಲ್ಲಿ 20 ನಾಯಿಗಳಿಗೆ ಆಶ್ರಯ ನೀಡಬಹುದಾಗಿದೆ.

ಈಗ 40 ಬೀದಿನಾಯಿಗಳನ್ನು ಹಿಡಿದು ಹೊಸ ಬೀದಿನಾಯಿ ಶೆಲ್ಟರ್‌ನಲ್ಲಿ ಆಶ್ರಯ ನೀಡಲಾಗಿದೆ. ಪ್ರತಿದಿನ ಕೂಡ ಬೀದಿನಾಯಿಗಳನ್ನ ಸೆರೆ ಹಿಡಿದು ಬಿಡಲಾಗುತ್ತಿದೆ. ದಿನಕ್ಕೆ ಎರಡು ಬಾರಿ ಊಟ ನೀಡಲಾಗ್ತಿದೆ.

Related posts

ನೆತ್ತರಕೆರೆ: ಎಡುವೆಂಚರ್ ಪಿಯು ಕಾಲೇಜಿನಲ್ಲಿ “ಪ್ರತಿಭಾಮೃತ” ಪ್ರತಿಭೆಗಳ ಅನಾವರಣ ಕಾರ್ಯಕ್ರಮ

Voiceoftulunadu

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್‌: ಸೈಬರ್ ಪೊಲೀಸರಿಗೆ ದೂರು ‘ಜಲಗಾರ ಯೂನಿವರ್ಸಿಟಿ‘ ಹೆಸರಿನ ನಕಲಿ ಖಾತೆಯಿಂದ ಮೆಸೇಜ್

voiceoftulunadu

ಪೊಳಲಿ :ಕ್ಷೇತ್ರದಲ್ಲಿ ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ಕ್ರಮ ಕೈಗೊಳ್ಳಲು ಮನವಿ ;

Voiceoftulunadu

Leave a Comment