27 C
ಮಂಗಳೂರು
July 6, 2026
Uncategorizedಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಮಳೆ ಅನಾಹುತ: ಕಂಕನಾಡಿ ನಾಗುರಿಯಲ್ಲಿ ಮನೆ ಕುಸಿತ, ಮೂವರ ದುರ್ಮರಣ, ಮೂವರ ರಕ್ಷಣೆ ಈ ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಸಹಾಯದ ಭರವಸೆ ನೀಡಿದ ಆರೋಗ್ಯ ಸಚಿವ ಯು.ಟಿ. ಖಾದರ್;

ಮಂಗಳೂರು: ಇಂದು ಮುಂಜಾನೆಸುರಿದ ಭಾರೀ ಮಳೆಗೆ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ನಾಗೋರಿಯಲ್ಲಿ ಭೂಕುಸಿತ ಸಂಭವಿಸಿ, ವಾಸದ ಮನೆಯೊಂದು ಕುಸಿದು ಬಿದ್ದಿದೆ. ಈ ದುರಂತದಲ್ಲಿ ಮಹಿಳೆ ಸೇರಿದಂತೆ ಇಬ್ಬರು ಬಾಲಕಿಯರು ಸೇರಿ ಒಟ್ಟು ಮೂವರು ಮೃತಪಟ್ಟಿದ್ದಾರೆ.

ಭೂ ಕುಸಿತದ ಸಂದರ್ಭ ಮನೆಯಲ್ಲಿದ್ದ ಒಟ್ಟು ಆರು ಜನರು ಸಿಲುಕಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ಆರಂಭಿಸಿದರು. ಒಬ್ಬ ಪುರುಷ ಮತ್ತು ಇಬ್ಬರು ಬಾಲಕಿಯರು ಸೇರಿ ಮೂವರನ್ನು ಸುರಕ್ಷಿತವಾಗಿ ರಕ್ಷಿಸಿ ಆಸ್ಪತ್ರೆಗೆದಾಖಲಿಸಲಾಗಿದೆ. ಮೃತದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ.ಎನ್ಸಿಆರ್ಎಫ್ ತಂಡವೂ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿತ್ತು.ಸದ್ಯ

ಸದ್ಯ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ದುರಂತದ ಬಗ್ಗೆ ಆರೋಗ್ಯ ಸಚಿವ ಯು.ಟಿ. ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆಯ ವಿವಿಧ ಸಭೆಗಳಲ್ಲಿ ಭಾಗವಹಿಸಲು ದೆಹಲಿಯಲ್ಲಿರುವ ಅವರು, ದುರ್ಘಟನೆಯ ಮಾಹಿತಿ ತಿಳಿದ ತಕ್ಷಣ ಮಂಗಳೂರಿಗೆ ಮರಳಲು ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.ಜಿಲ್ಲಾಧಿಕಾರಿಗಳೊಂದಿಗೆ

ಜಿಲ್ಲಾಧಿಕಾರಿಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ಸಚಿವ ಖಾದ‌ರ್, ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಹಾಗೂ ಮೃತರ ಕುಟುಂಬಗಳಿಗೆ ಪರಿಹಾರ ಮೊತ್ತವನ್ನು ತಕ್ಷಣವೇ ವಿತರಿಸುವಂತೆ ಸೂಚನೆ ನೀಡಿದ್ದಾರೆ.ಈ ದುರಂತದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಪರಿಸ್ಥಿತಿಯನ್ನು ಜಿಲ್ಲಾಡಳಿತ ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ.

Related posts

ಜಗಜ್ಯೋತಿ ಕಲಾವೃಂದ ಸಂಸ್ಥೆಯಿಂದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕಅಖಿಲ ಭಾರತ ಮಟ್ಟದ ಕಥೆ ಹಾಗೂ ಕವಿತಾ ಪ್ರಶಸ್ತಿಗಳ ಸ್ಪರ್ಧೆಗೆ ಆಹ್ವಾನ

voiceoftulunadu

ರಾಜ್ಯದ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ:ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆ ಸಚಿವ ಯು.ಟಿ. ಖಾದರ್ ನೇಮಕ;

Voiceoftulunadu

ತಮಿಳುನಾಡು ರಾ.ಸಭಾ ಸದಸ್ಯ ಪ್ರವೀಣ್ ಚಕ್ರವರ್ತಿ ಭೇಟಿ ಮಾಡಿದ ಮಂಜುನಾಥ ಭಂಡಾರಿ, ತಮಿಳುನಾಡು ಮತ್ತು ಕರ್ನಾಟಕದ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ;

voiceoftulunadu

Leave a Comment