28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ರಾಷ್ಟ್ರೀಯ ಗೌರವ ಐಕಾನ್ ಪ್ರಶಸ್ತಿ’ಗೆ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್ ಆಯ್ಕೆ ;

ಮಂಗಳೂರು: ಕರ್ನಾಟಕ ಜಾನಪದ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್ ಅವರಿಗೆ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ‘ರಾಷ್ಟ್ರೀಯ ಗೌರವ ಐಕಾನ್ ಅವಾರ್ಡ್ ಫಾರ್ ಸೋಶಿಯಲ್ ’ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.

ಈ ಪ್ರಶಸ್ತಿಯನ್ನು ಗ್ಲೋಬಲ್ ಅಚೀವರ್ಸ್ ಕೌನ್ಸಿಲ್ ವತಿಯಿಂದ ನೀಡಲಾಗುತ್ತಿದ್ದು, ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವು 2026ರ ಆಗಸ್ಟ್ 23ರಂದು ಮಧ್ಯಾಹ್ನ 2 ಗಂಟೆಗೆ ನವದೆಹಲಿಯ ಹೋಟೆಲ್ ಸಮ್ರಾಟ್‌ನಲ್ಲಿ ನಡೆಯಲಿದೆ.

ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರ ಸಮರ್ಪಣೆ, ನಿರಂತರ ಪರಿಶ್ರಮ ಹಾಗೂ ಸಮಾಜಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂಬುದಾಗಿ ಗ್ಲೋಬಲ್ ಅಚೀವರ್ಸ್ ಕೌನ್ಸಿಲ್ ತಿಳಿಸಿದೆ.

ಈ ಗೌರವಕ್ಕೆ ಆಯ್ಕೆಯಾಗಿರುವ ಶ್ರೀ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್ ಅವರಿಗೆ ಕುಟುಂಬಸ್ಥರು,ಗಣ್ಯರು, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದು, ಅವರ ಸಾಮಾಜಿಕ ಸೇವಾ ಕಾರ್ಯಗಳು ಇನ್ನಷ್ಟು ಯಶಸ್ವಿಯಾಗಿ ಮುಂದುವರಿಯಲಿ ಎಂದು ಶುಭ ಹಾರೈಸಿದ್ದಾರೆ.

ನಮ್ಮ ವಾಯ್ಸ್ ಆಫ್ ತುಳುನಾಡು ಪತ್ರಿಕೆ ಹಾಗೂ ವಾಹಿನಿ ತಂಡದ ವತಿಯಿಂದ ಶ್ರೀ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್ ಅವರಿಗೆ ತುಂಬು ಹೃದಯದ ಹಾರ್ದಿಕ ಶುಭಾಶಯಗಳು 💐

Related posts

ಸೌದಿ ಅರೇಬಿಯಾ ಬಿಲ್ಲವರ ಅಸೋಸಿಯೇಷನ್ : ಆ.16 ರಂದು ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವಿತರಣೆ :

Voiceoftulunadu

ಮುದರಂಗಡಿ ಎಸ್ ಐ ಆರ್ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ;

Voiceoftulunadu

ವಾಲಿಕುಂಜ ಚಾರಣ : ಒಂದು ರುದ್ರ ರಮಣೀಯ ಅನುಭವ …!

Voiceoftulunadu

Leave a Comment