September 4, 2026
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶಂಕರಪುರ ಚರ್ಚಿನ ಸಭಾಂಗಣದಲ್ಲಿ ಶಿರ್ವ ಪೋಲೀಸರಿಂದ ಕಾನೂನು ಮಾಹಿತಿ ಶಿಬಿರ : ಸಂಪನ್ಮೂಲ ವ್ಯಕ್ತಿಗಳಾಗಿ ಕಾನೂನು ಬಗ್ಗೆ ಮಾಹಿತಿ ನೀಡಿದ ಮಂಜುನಾಥ ಅಡಿಗ ;

ವರದಿ /ಚಿತ್ರ: ಈ ಮೀಡಿಯಾ

ಶಿರ್ವ: ಶಂಕರಪುರ ಚರ್ಚಿನ ಸಭಾಂಗಣದಲ್ಲಿ ಕಾನೂನು ಮಾಹಿತಿ ಶಿಬಿರ ನೆರವೇರಿತು.

ಶಿರ್ವ ಆರಕ್ಷಕ ಠಾಣೆಯ ಹೆಡ್ ಕಾಸ್ಟೇಬಲ್ ಮಂಜುನಾಥ ಅಡಿಗ ಸಂಪನ್ಮೂಲ ವ್ಯಕ್ತಿಗಳಾಗಿ ಕಾನೂನು ಬಗ್ಗೆ ಮಾಹಿತಿ ನೀಡಿದರು.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಲೈಂಗಿಕ ದೌರ್ಜನ್ಯ, ಕಿರುಕುಳ ಮತ್ತು ಶೋಷಣೆಯಿಂದ ರಕ್ಷಿಸಲು ಪೋಕೋ ಕಾನೂನು ಜಾರಿಯಲ್ಲಿದೆ.

18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಈ ಕಾಯ್ದೆಯಡಿ “ಮಗು”ಎಂದು ಪರಿಗಣಿಸಲಾಗುತ್ತದೆ. ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ ಮತ್ತು ಮಕ್ಕಳ ಅಶ್ಲೀಲ ಚಿತ್ರ, ವೀಡಿಯೊಗಳಿಗೆ ಸಂಬಂಧಿಸಿದ ಅಪರಾಧಗಳಿಗೆ ಕಠಿಣ ಶಿಕ್ಷೆಯೂ ಇದೆ.

ಮಗುವಿನೊಂದಿಗೆ ಏನಾದರೂ ಅನುಮಾನಾಸ್ಪದ ಘಟನೆ ನಡೆದರೆ ಅದನ್ನು ಮುಚ್ಚಿಡದೆ, ತಕ್ಷಣ ಪೊಲೀಸ್ ಅಥವಾ ಸಂಬಂಧಪಟ್ಟ ಮಕ್ಕಳ ರಕ್ಷಣಾ ಅಧಿಕಾರಿಗಳನ್ನು ಸಂಪರ್ಕಿಸುವುದು ಮುಖ್ಯ.

ರಸ್ತೆ ಸುರಕ್ಷೆ ಅಪಘಾತಗಳನ್ನು ತಡೆಯಲು ವಾಹನ ಚಾಲಕರು ಹಾಗೂ ಪಾದಚಾರಿಗಳು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲೈಟ್ ಧರಿಸಬೇಕು. ಕಾರು ಮತ್ತು ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸಬೇಕು. ವಾಹನ ಚಲಾಯಿಸುವಾಗ ಮೊಬೈಲ್ ಫೋನ್ ಬಳಸಬಾರದು. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬಾರದು.

ಚಾಲಕರು ಮಾದಕ ವಸ್ತುಗಳ ವಿರುದ್ಧ ಜಾಗೃತಿ:

ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೆ, కుటుంబ ಮತ್ತು ಸಮಾಜದ ಮೇಲೂ ದುಷ್ಪರಿಣಾಮ ಬೀರುತ್ತದೆ. ವಿಶೇಷವಾಗಿ ಯುವಜನರು ಮಾದಕ ವಸ್ತುಗಳ ಆಮಿಷಕ್ಕೆ ಒಳಗಾಗದಂತೆ ಜಾಗರೂಕರಾಗಿರಬೇಕು .

.

ಸೈಬ‌ರ್ ವಂಚನೆಯಿಂದ ರಕ್ಷಿಸಿಕೊಳ್ಳಲು OTP, PIN, CVV, ATM ಪಾಸ್ವರ್ಡ್ ಅಥವಾ ಬ್ಯಾಂಕ್ ವಿವರಗಳನ್ನು ಹಂಚಿಕೊಳ್ಳಬೇಡಿ. ಅಪರಿಚಿತ ವ್ಯಕ್ತಿಗಳು ಕಳುಹಿಸುವ ಲಿಂಕ್ಗಳನ್ನು ಕ್ಲಿಕ್ ಮಾಡಬೇಡಿ. ಬ್ಯಾಂಕ್ ಅಥವಾ ಸರ್ಕಾರಿ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿದರೂ ವೈಯಕ್ತಿಕ ಹಾಗೂ ಹಣಕಾಸಿನ ಮಾಹಿತಿಯನ್ನು ನೀಡಬೇಡಿ ಎಂದು ಪೊಲೀಸರು ಮನವಿ ಮಾಡಿದರು.

ವೇದಿಕೆಯಲ್ಲಿ ಚರ್ಚಿನ ಪ್ರಧಾನ ಧರ್ಮ ಗುರುಗಳಾದ ವಂದನೀಯ ಡಾ. ಅನಿಲ್ ಕ್ಯಾಸ್ಟಲಿನೊ, ಸಹಾಯಕ ಧರ್ಮ ಗುರುಗಳಾದ ವಂದನೀಯ ಜೆಸೆಲ್ ಪ್ರದೀಪ್, ಉಪಾಧ್ಯಕ್ಷರಾದ ಜಾನ್ ಮಾರ್ಟಿಸ್, ಕಾರ್ಯದರ್ಶಿಗಳಾದ ಆನಂದ್‌ ಡಿಸೋಜಾ ಉಪಸ್ಥಿತರಿದ್ದರು.

Related posts

ಎರ್ಮಾಳು ಶ್ರೀನಿಧಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ: ಪಡುಬಿದ್ರಿ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಶ್ರೀಮತಿ ರಾಜಶ್ರೀ ಕಿಣಿ ಉಪಸ್ಥಿತಿ;

Voiceoftulunadu

ಮಂಗಳೂರು: ಪ್ರಾಮಾಣಿಕತೆ ಮೆರೆದ ರೈಲ್ವೆ ಉದ್ಯೋಗಿ;

Voiceoftulunadu

ನವಿ ಮುಂಬಯಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ವಂದೇ ಮಾತರಂ ಸಮೂಹ ಗಾನ ಹಾಗೂ ಮಾನವ ಸರಪಳಿ ಸಂಪನ್ನ;

Voiceoftulunadu

Leave a Comment