27 C
ಮಂಗಳೂರು
July 6, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಂದಿಕೂರು ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಆನೈನ್ ಮೂಲಕ ಡಾ. ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರಿಂದ ಆಶೀರ್ವಾದ;

ವರದಿ /ಚಿತ್ರ:ಇ ಮೀಡಿಯಾ

ಪಡುಬಿದ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಪು ತಾಲೂಕು ಪಡುಬಿದ್ರಿ ವಲಯದ ನಂದಿಕೂರು ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ದಡಿಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ವಿದ್ಯಾರ್ಥಿಗಳಿಗೆ ಆನ್ಸೆನ್ ಜಾಗೃತಿ ಕಾರ್ಯಗಾರ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ನಂದಿಕೂರು ಸರಕಾರಿ ಶಾಲೆಯಲ್ಲಿ ಸ್ವಾಸ್ತ್ರ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದಲ್ಲಿ ಆನೈನ್ ಮೂಲಕ ಧರ್ಮಾಧಿಕಾರಿ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ವಿದ್ಯಾರ್ಥಿಗಳಿಗೆ ಆಶೀರ್ವಾದಿಸಿದರು.

ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಆಶಯ ಭಾಷಣ ಮಾಡಿದರು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ. ವೆಂಕಟೇಶ್ ಪ್ರಸನ್ನ ಬೆಂಗಳೂರು, ಡಾ. ದೇವಿಪ್ರಸಾದ್ ಶೆಟ್ಟಿ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಲಕ್ಷ್ಮಣ ಶೆಟ್ಟಿ ಅರಂತಾಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಗನ್ನಾಥ ಶೆಟ್ಟಿ, ಸದಸ್ಯರಾದ ನಾಗರಾಜ್ ಭಟ್, ಸಾಯಿನಾಥ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಅಧ್ಯಕ್ಷೆ ಬೇಬಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರಮಣಿ, ಶಾಲಾ ಶಿಕ್ಷಕರು, 110 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಬಂಟವಾಳ ಬಂಟರ ಸಂಘದ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವಕ್ಕೆ ಚಾಲನೆ:

voiceoftulunadu

ಹಿರಿಯ ಪತ್ರಕರ್ತ-ನಿವೃತ್ತ ಪ್ರಾಂಶುಪಾಲ ಪ್ರೊ| ಕೆ. ಬಾಲಕೃಷ್ಣ ಗಟ್ಟಿ ನಿಧನ:

voiceoftulunadu

ಹಿರಿಯ ಶಿಕ್ಷಣತಜ್ಞ, ಕಮಾಂಡರ್ ಡಾ. ಅನಿಲ್ ರಾಣಾ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯ ಗರಿ :ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ

Voiceoftulunadu

Leave a Comment