27 C
ಮಂಗಳೂರು
July 6, 2026
Uncategorizedರಾಜಕೀಯರಾಜ್ಯ/ದೇಶ

ಸಿ ಎಲ್ ಪಿ (CLP) ನೂತನ ನಾಯಕರಾಗಿ ಡಿ. ಕೆ. ಶಿವಕುಮಾರ್ ಆಯ್ಕೆ

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಆಯ್ಕೆ ಆಗಿದ್ದಾರೆ. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಹೆಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಡಾ. ಜಿ ಪರಮೇಶ್ವರ್ ಅನುಮೋದಿಸಿದರು. ಇದನ್ನು ಸಭೆಯು ಒಕ್ಕೊರಲಿನಿಂದ ಬೆಂಬಲಿಸಿತು.ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಘೋಷಿಸಿದರು.ಇದಕ್ಕೂ ಮೊದಲು ಸಭೆಯ ಆರಂಭದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ಪ್ರಕ್ರಿಯೆಯು ಸಿಎಂ ಸಿದ್ದರಾಮಯ್ಯ ಪ್ರಸ್ತಾವನೆಯೊಂದಿಗೆ ನಡೆಯಲಿದೆ ಎಂದು ಎಐಸಿಸಿ ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಪ್ರಕಟಿಸಿ, ಚಾಲನೆ ನೀಡಿದರು.ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ವಿಚಾರವನ್ನು ಎಐಸಿಸಿ ವಿವೇಚನೆಗೆ ಬಿಡಲಾಗಿದೆ ಎಂಬ ಒಂದು ಸಾಲಿನ ನಿರ್ಣಯವನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದರು. ಪರಮೇಶ್ವರ್ ನುಮೋದಿಸಿದರು. ಎಲ್ಲ ಶಾಸಕರು ಕೈ ಎತ್ತುವ ಮೂಲಕ ಇದನ್ನು ಬೆಂಬಲಿಸಿದರು.ನಂತರ 10 ನಿಮಿಷಗಳ ವಿರಾಮ ನೀಡಲಾಗಿದೆ ಎಂದು ಸುರ್ಜೆವಾಲ ಹೇಳಿದರು. ಸಿಎಂ ಸಿದ್ದರಾಮಯ್ಯ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಿಎಂ ಕೊಠಡಿಗೆ ತೆರಳಿದರು. ಅಲ್ಲಿಂದ ಸಮ್ಮೇಳನ ಸಭಾಂಗಣಕ್ಕೆ ಮೂವರು ವಾಪಸ್ಸು ಬಂದ ನಂತರ ಶಾಸಕಾಂಗ ಪಕ್ಷದ ನೂತನ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು.ನಂತರ ನೂತನ ನಾಯಕ ಡಿ ಕೆ ಶಿವಕುಮಾರ್ ನಿರ್ಗಮಿತ ನಾಯಕ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿಯ ಸೇವೆಯನ್ನು ಕೊಂಡಾಡುವ ನಿರ್ಣಯ ಮಂಡಿಸಿ, ಸಭೆಯ ಬೆಂಬಲ ಕೋರಿದರು. ಸಭೆ ಒಕ್ಕೊರಲಿನಿಂದ ಬೆಂಬಲಿಸಿತು.

Related posts

ಮಳೆ ಅನಾಹುತ: ಕಂಕನಾಡಿ ನಾಗುರಿಯಲ್ಲಿ ಮನೆ ಕುಸಿತ, ಮೂವರ ದುರ್ಮರಣ, ಮೂವರ ರಕ್ಷಣೆ ಈ ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಸಹಾಯದ ಭರವಸೆ ನೀಡಿದ ಆರೋಗ್ಯ ಸಚಿವ ಯು.ಟಿ. ಖಾದರ್;

Voiceoftulunadu

ತುಳುವರ ನವಗ್ರಹಗಳು – ತುಳುನಾಡಿನ ಜೀವನತತ್ವ, ಕಾಲಗಣನೆ ಮತ್ತು ಜ್ಞಾನಪರಂಪರೆಯ ಪ್ರತಿಬಿಂಬ;

voiceoftulunadu

ವಿ ವಿ ಕಾಲೇಜು ಪ್ರಾಂಶುಪಾಲರಾಗಿ ಡಾ. ಜಯವಂತ ನಾಯಕ್:

voiceoftulunadu

Leave a Comment