27 C
ಮಂಗಳೂರು
July 6, 2026
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶ

ಹಿರಿಯ ಶಿಕ್ಷಣತಜ್ಞ, ಕಮಾಂಡರ್ ಡಾ. ಅನಿಲ್ ರಾಣಾ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯ ಗರಿ :ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ

ವರದಿ ಚಿತ್ರ ಈ ಮೀಡಿಯಾ

ಬೆಂಗಳೂರು: ಶಿಕ್ಷಣ, ಸಂಶೋಧನೆಹಾಗೂ ಶೈಕ್ಷಣಿಕ ಆಡಳಿತ ಕ್ಷೇತ್ರಗಳಲ್ಲಿ ಮೂರು ದಶಕಗಳಿಗೂ ಅಧಿಕ ಅವಧಿಯ ವಿಶಿಷ್ಟ ಸೇವೆ ಸಲ್ಲಿಸಿರುವ ಹಿರಿಯ ಶಿಕ್ಷಣತಜ್ಞ ಮಣಿಪಾಲ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿರ್ದೇಶಕ ಹಾಗೂ ಈ ಹಿಂದೆ ಓರಿಯೆಂಟಲ್ ವಿಶ್ವವಿದ್ಯಾಲಯ, ಇಂದೋರ್ನ ಕುಲಪತಿ ಡಾ. ಅನಿಲ್ ರಾಣಾ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಭಾರತೀಯ ನೌಕಾಪಡೆಯ ఎంజినియరింగో ವಿಭಾಗದಲ್ಲಿ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದ ಡಾ. ರಾಣಾ ಅವರು, ಬಳಿಕ ಶಿಕ್ಷಣ ಕ್ಷೇತ್ರದಲ್ಲಿದೇಶ-ವಿದೇಶಗಳ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಐಐಟಿ ಬಾಂಬೆದಿಂದ ರಿಲಯಬಿಲಿಟಿ ಎಂಜಿನಿಯರಿಂಗ್ನಲ್ಲಿ ಪಿಎಚ್.ಡಿ. ಹಾಗೂ ಐಐಟಿ ದೆಹಲಿಯಿಂದ ಎಂ.ಟೆಕ್. ಪದವಿ ಪಡೆದಿರುವ ಅವರು ಸಂಶೋಧನೆ, ಬೋಧನೆ ಹಾಗೂ ಶೈಕ್ಷಣಿಕ ಆಡಳಿತ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ್ದಾರೆ.

ಅವರ ಸೇವೆ ಹಾಗೂ ಸಾಧನೆಯನ್ನು ಪರಿಗಣಿಸಿ, ಜೂನ್ 21ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ “ಅಖಿಲ ಕರ್ನಾಟಕ ಶಿಕ್ಷಕರ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ”ದಲ್ಲಿ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮ ಸಂಯೋಜಕ ಡಾ. ಚಂದ್ರಶೇಖರ ಮಾಡಲಗೇರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಿದ್ದರು.ಈ ಸಮಾರಂಭವನ್ನು ಆರ್ಯಭಟ ಎಜುಕೇಶನಲ್ ಟ್ರಸ್ಟ್ ಹಾಗೂ ಚೇತನ ಫೌಂಡೇಶನ್ ಕರ್ನಾಟಕ ಸಂಯುಕ್ತವಾಗಿ ಆಯೋಜಿಸಿದ್ದರು. ಶಿಕ್ಷಣ, ಸಾಹಿತ್ಯ, ಕಲೆ, ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

Related posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ” ನುವಾ” ವಜ್ರಾಭರಣ ಅನಾವರಣ: ವಜ್ರಾಭರಣ ಅನಾವರಣಗೊಳಿಸಿದ ರೂಪದರ್ಶಿಗಳಾದ ನಿಧಿ, ಅನುಷಾ, ನಿಹಾರಿಕಾ ಶೆಟ್ಟಿ, ಶ್ರಾವ್ಯ;

Voiceoftulunadu

ಕೇರಳ ಸಿಎಂ ಆಗಿ ವಿ.ಡಿ ಸತೀಶನ್‌, 20 ಸಂಪುಟ ಸಚಿವರಿಂದ ಇಂದು ಪ್ರಮಾಣ ಸ್ವೀಕಾರ|

voiceoftulunadu

ಬಂಟ್ಸ್ ಹಾಸ್ಟೆಲ್ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಗಣೇಶೋತ್ಸವ ಸಮಿತಿಯ ಸಂಚಾಲಕರಾಗಿ ಜಯಶೀಲ ಅಡ್ಯಾಂತಾಯ ಅಡ್ಯಾರ್‌ಗುತ್ತು ಆಯ್ಕೆ;

Voiceoftulunadu

Leave a Comment