27.7 C
ಮಂಗಳೂರು
July 6, 2026
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಪಡುಬಿದ್ರಿ ಕಡಲು ಕೊರೆತ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ ವಿ ಅಮೀನ್ ಮನವಿ: ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಶ್ವಾಸ್ ವಿ. ಅಮೀನ್;

ವರದಿ/ ಚಿತ್ರ:ಈ ಮೀಡಿಯಾ

ಪಡುಬಿದ್ರಿ, ಜು. 5: ಕಾಪು ತಾಲೂಕಿನ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ ಸಮುದ್ರ ಕೊರೆತವನ್ನು ತಡೆಗಟ್ಟಲು ಪಾಂಡುರಂಗ ಕೋಟ್ಯಾನ್ ಅವರ ಮನೆಯ ಮುಂಭಾಗದಿಂದ ಸಾಗರ ವಿದ್ಯಾ ಮಂದಿರವರೆಗೆ ಸುಮಾರು 700 ಮೀಟರ್ ಉದ್ದದ ಪ್ರದೇಶದಲ್ಲಿ ಶಾಶ್ವತವಾಗಿ ಕಡಲಿಗೆ ತಡೆಗೋಡೆ ನಿರ್ಮಿಸುವಂತೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಶ್ವಾಸ್ ವಿ. ಅಮೀ ರಾಜ್ಯದ ಆರೋಗ್ಯ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ, ನಡಿಪಟ್ಟಣ ಪ್ರದೇಶದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಸಮುದ್ರ ಕೊರೆತದಿಂದ ಸ್ಥಳೀಯ ನಿವಾಸಿಗಳ ಮನೆಗಳು, ಸಾರ್ವಜನಿಕ ಆಸ್ತಿಪಾಸ್ತಿಗಳು ಹಾಗೂ ಮೀನುಗಾರರ ಜೀವನೋಪಾಯಕ್ಕೆ ಗಂಭೀರ ಅಪಾಯ ಎದುರಾಗಿರುವುದನ್ನು ಉಲ್ಲೇಖಿಸಲಾಗಿದೆ. ಮಳೆಗಾಲದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗುವುದರಿಂದ ಪರಿಸ್ಥಿತಿ ಮತ್ತಷ್ಟು ಆತಂಕಕಾರಿಯಾಗಿದ್ದು, ಸ್ಥಳೀಯರು ಭಯದ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ ಎಂದು ತಿಳಿಸಿದ್ದಾರೆ.

ಈ ಪ್ರದೇಶದ ಸಮೀಕ್ಷೆಯನ್ನು ಸಂಬಂಧಪಟ್ಟ ಇಲಾಖೆಯು ಈಗಾಗಲೇ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ, ಸುಮಾರು 700 ಮೀಟರ್ ವ್ಯಾಪ್ತಿಯಲ್ಲಿ ಕಡಲ ತಡೆಗೋಡೆ ನಿರ್ಮಾಣಕ್ಕೆ ಅಗತ್ಯ ಆಡಳಿತಾತ್ಮಕ ಅನುಮೋದನೆ ಹಾಗೂ ಅನುದಾನವನ್ನು ಮಂಜೂರು ಮಾಡಿ ಶೀಘ್ರದಲ್ಲೇ ಕಾಮಗಾರಿ ಆರಂಭಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಕಾಮಗಾರಿಯಿಂದ ಸಮುದ್ರ ಕೊರೆತವನ್ನು ಪರಿಣಾಮಕಾರಿಯಾಗಿ ತಡೆಗಟ್ಟಿ, ಸ್ಥಳೀಯರ ಜೀವ ಮತ್ತು ಆಸ್ತಿಯನ್ನು ರಕ್ಷಿಸುವುದರ ಜೊತೆಗೆ ಕರಾವಳಿ ಪ್ರದೇಶದ ಸುರಕ್ಷತೆಯನ್ನು ಖಾತ್ರಿಪಡಿಸಲು ಸಾಧ್ಯವಾಗಲಿದೆ ಎಂದು ವಿಶ್ವಾಸ್ ವಿ. ಅಮೀನ್ ತಿಳಿಸಿದ್ದಾರೆ.

Related posts

ಜೈನಕಾಶಿ ಮೂಡಬಿದಿರೆ ಇದರ ಸ್ವಸ್ತಿಶ್ರೀ ಭಟ್ಟಾರಕ ಭವನದಲ್ಲಿ ಯೋಗ ಪ್ರಾತ್ಯಕ್ಷಿಕೆಯೋಗಾಸನಗೈದ ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ  ;

Voiceoftulunadu

ಅಕ್ಷರ ತಪಸ್ವಿನಿ, ಕ್ರೀಡಾಂಗಣದ ಜಿಂಕೆ: ಮಣ್ಣಿನ ಮಗಳು ಗೀತಾ ಎ. ಶೆಟ್ಟಿ ಅವರ ಯಶೋಗಾಥೆ”

voiceoftulunadu

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ 2 ದಿನಗಳ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಕೇಂದ್ರ ಸಚಿವೆ

voiceoftulunadu

Leave a Comment