November 5, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಭೋವಿ ಜನಾಂಗಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನಿರಾಕರಣೆ : ಪವನ್ ಕುಮಾರ್ ಶಿರ್ವಉಡುಪಿ – ದಕ ಜಿಲ್ಲಾಡಳಿತದ ವಿರುದ್ಧ ಹೋರಾಟದ ಎಚ್ಚರಿಕೆ;

ವರದಿ /ಚಿತ್ರ: ಈ ಮೀಡಿಯಾ

ಕಾಪು: ಭೋವಿ ಜನಾಂಗದವರಿಗೆ ಪರಿಶಿಷ್ಟ ಜಾತಿ (ಎಸ್ಸಿ) ಪ್ರಮಾಣ ಪತ್ರ ನೀಡಲು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರಾಕರಿಸುತ್ತಿರುವ ಧೋರಣೆಯನ್ನು ಖಂಡಿಸಿ, ಸಮಸ್ಯೆ ಬಗೆಹರಿಯುವವರೆಗೆ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಎಚ್ಚರಿಕೆ ನೀಡಿದರು.

ಕಾಪು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 70 ಸಾವಿರಕ್ಕೂ ಅಧಿಕ ಭೋವಿ ಜನಾಂಗದವರು ವಾಸಿಸುತ್ತಿದ್ದು, ಪರಿಶಿಷ್ಟ ಜಾತಿ ಪ್ರಮಾಣ ಪತ್ರನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿರುವುದರಿಂದ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.

ಅನೇಕ ಕುಟುಂಬಗಳಲ್ಲಿ ತಂದೆಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರವಿದ್ದರೆ, ಮಕ್ಕಳಿಗೆ ಪ್ರವರ್ಗ 1 ಎಂದು ಜಾತಿ ಪ್ರಮಾಣ ಪತ್ರ ನೀಡುತ್ತಿರುವುದು ಗೊಂದಲಕ್ಕೆ ಕಾರಣವಾಗಿದೆ. ಇದರಿಂದ ವಿದ್ಯಾರ್ಥಿಗಳ ಶಿಕ್ಷಣ, ವಿದ್ಯಾರ್ಥಿವೇತನ, ಮೀಸಲಾತಿ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ತೊಂದರೆಯಾಗುತ್ತಿದೆ ಎಂದು ಅವರು ತಿಳಿಸಿದರು.

ಭೋವಿ ಜನಾಂಗಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವ ಕುರಿತು ಹೈಕೋರ್ಟ್ ಆದೇಶವಿದ್ದರೂ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಅದನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿಲ್ಲ ಎಂದು ಆರೋಪಿಸಿದ ಅವರು, ತಕ್ಷಣ ಸಮಸ್ಯೆ ಬಗೆಹರಿಸಿ ಅರ್ಹರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಆಗ್ರಹಿಸಿದರು.

ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯದಿದ್ದಲ್ಲಿ ಜಿಲ್ಲಾಡಳಿತದ ವಿರುದ್ಧ ಉಗ್ರ ಹಾಗೂ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಪವನ್ ಕುಮಾರ್ ಶಿರ್ವ ಎಚ್ಚರಿಕೆ ನೀಡಿದರು.

Related posts

ಫೆಸ್ಟ್’ಗೆ ಚಾಲನೆ ಬೆಳ್ಳಿ ಆಭರಣಗಳ ಅನಾವರಣ ಗೊಳಿಸಿದ ರೂಪದರ್ಶಿಗಳಾದ ಡಾ. ಆ್ಯನ್ಸಿ ಡಿಸೋಜಾ, ಭಾರತಿ ಸುರೇಶ್(Udupi) :

voiceoftulunadu

ಸುಮನಸಾ ಕೊಡವೂರು ಸಂಘಟನೆಯ ರಜತ ಮಹೋತ್ಸವದ ಅಂಗವಾಗಿ ವಿನೂತನ ಪ್ರಯೋಗ : ಕಾರ್ಯಕ್ರಮ ಉದ್ಘಾಟಿಸಿದ ರಂಗಕರ್ಮಿ, ನೀನಾಸಂ ಜಯರಾಮ ನೀಲಾವರ ;

Voiceoftulunadu

ಉಡುಪಿ ಶ್ರೀಕೃಷ್ಣನ ದಿವ್ಯ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸಕೀರ್ತನೆ ಗಾಯನ : ವಿಶ್ವದಾಖಲೆ ನಿರ್ಮಿಸಿದ ವಿದುಷಿ ಸಂಗೀತ ಬಾಲಚಂದ್ರರಿಗೆ ‘ಗೀತಾ ಗಂಗೋತ್ರಿ’ಬಿರುದು;

Voiceoftulunadu

Leave a Comment