28.5 C
ಮಂಗಳೂರು
September 4, 2026
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಲಾವಣ್ಯ ಹಂತಕನಿಗೆ ವೆಸ್ಲಾಕ್ ಜಿಲ್ಲಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಹಂತಕ ಚೇತನ್ ವಿಷ ಪದಾರ್ಥ ಸೇವಿಸಿದ್ದ ಬಗ್ಗೆ ಮಾಹಿತಿ ನೀಡಿದ್ದ

ವರದಿ /ಚಿತ್ರ :ಈ ಮೀಡಿಯಾ

ಬಂಟ್ವಾಳ: ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಗೌಡರ ಹಂತಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಇನ್ನೂ ಮಂಗಳೂರಿನ ವೆನ್ಹಾಕ್ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕ (ಐಸಿಯು)ನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಕೃತ್ಯದ ಬಳಿಕ ಪರಾರಿಯಾಗಿದ್ದ ಆರೋಪಿ ಚೇತನ್ ನನ್ನು ಪೊಲೀಸರು ವಶಪಡಿಸಿದ ವೇಳೆ, ತಾನು ವಿಷ ಪದಾರ್ಥ ಸೇವಿಸಿದ್ದ ಬಗ್ಗೆ ಮಾಹಿತಿ ನೀಡಿದ್ದ.ಪೊಲೀಸರು ಆತನನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಸಾಕ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೆನ್ಹಾಕ್ ಆಸ್ಥೆಯ ವೈದ್ಯರ ಸಲಹೆಯಂತೆ, ಸುಮಾರು ಐದು ದಿನಗಳ ಕಾಲ ವೈದ್ಯಕೀಯ ನಿಗಾದಲ್ಲಿಟ್ಟು ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಬೇಕಾದ ಹಿನ್ನೆಲೆಯಲ್ಲಿ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದು ಬಂದಿದೆ.

ಸದ್ಯ ಆರೋಪಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕವಷ್ಟೆ ಪೊಲೀಸರು ಈತನ ಅಧಿಕೃತ ಬಂಧನ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.ಆಸ್ಪತ್ರೆಯಲ್ಲಿ ಆರೋಪಿಗೆ ಪೊಲೀಸ್ ಭದ್ರತೆಗೆ ಕಲ್ಪಿಸಲಾಗಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

Related posts

ಕಾಪು ಶ್ರೀ ಹಳೆ ಮಾರಿಯಮ್ಮಸಭಾಭವನದಲ್ಲಿ ನಡೆಯಲಿರುವ ಸ್ಪರ್ಧೆ.ಕಾಪುವಿನಲ್ಲಿ ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ;

Voiceoftulunadu

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಶಿಕ್ಷಣ ತಜ್ಞ ಆದರ್ಶ್ ಶೆಟ್ಟಿ ನೇಮಕ;

Voiceoftulunadu

ಸಾಂತಕ್ರೂಜ್ ; ಪ್ರಭಾತ್ ಕಾಲೊನಿ ಪ್ರೀಮಿಯರ್ ಲೀಗ್-2026 ಕ್ರಿಕೆಟ್ ಟೂರ್ನಮೆಂಟ್ಸಮಾಜ ಸೇವಕ ಶೇಖರ ಜೆ.ಸಾಲಿಯಾನ್‌ಗೆ ‘ಸಮಾಜ ಸೇವಾ ರತ್ನ’ ಪ್ರಶಸ್ತಿ ಪ್ರಧಾನ:

voiceoftulunadu

Leave a Comment