September 4, 2026
Uncategorizedಉದ್ಯೋಗ/ಶಿಕ್ಷಣಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ : ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ, ಇನ್ನಷ್ಟು ತಲೆದಂಡ ಸಾಧ್ಯತೆ;

ವರದಿ/ ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ

ನವದೆಹಲಿ: ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನೆ ಮುಂದುವರಿದಿದೆ. ದೇಶದ ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರವು ತನ್ನ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದೆ.

ಇದರ ನಡುವೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಬೃಹತ್ ಕಾರ್ಯಾಚರಣೆ ನಡೆಸಿದ್ದು, ತನ್ನ 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದೆ. ಎನ್ಟಿಎಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸುವ ಭಾಗವಾಗಿ ಇನ್ನೂ ಹಲವು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಸಂಸ್ಥೆಯೊಳಗೆ ಹೊಣೆಗಾರಿಕೆಯನ್ನು ಜಾರಿಗೊಳಿಸಲು ಸರ್ಕಾರವು ಕ್ರಮಗಳನ್ನು ಬಿಗಿಗೊಳಿಸುತ್ತಿದ್ದು, ವಜಾಗೊಂಡಿರುವ ಕೆಲವು ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮವನ್ನೂ ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣಾ ಕ್ರಮಗಳು ಹೊರಬರಲಿವೆ. ಪ್ರಶ್ನೆಪತ್ರಿಕೆ ಸೋರಿಕೆಯ ಆರೋಪಗಳಿಂದಾಗಿ ವಿವಾದಕ್ಕೆ ಸಿಲುಕಿರುವ ಎನ್‌ಟಿಎ ಸಂಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸುವ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ನೀಟ್ ಪೇಪರ್ ಲೀಕ್ ಪ್ರಕರಣದಿಂದಾಗಿ ಎನ್‌ಟಿಎ ಕಾರ್ಯವೈಖರಿ ತೀವ್ರ ಟೀಕೆಗೆ ಗುರಿಯಾಗಿದ್ದು, ಸಂಸ್ಥೆಯನ್ನು ಸಂಪೂರ್ಣ ಪುನರ್ರಚನೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ. ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸಂಸ್ಥೆ ವಿಫಲವಾಗಿದೆ ಎಂದು ಟೀಕಿಸಿ ಎನ್‌ಟಿಎಯನ್ನೇ ರದ್ದುಗೊಳಿಸಬೇಕೆಂದು ಹಲವರು ಆಗ್ರಹಿಸಿದ್ದರೂ, ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.

ಪೇಪರ್ ಲೀಕ್ ತಡೆ ಮಸೂದೆಗೆ ಸಂಪುಟ ಸಮ್ಮತಿ:ಪೇಪರ್ ಲೀಕ್ ಪ್ರಕರಣಗಳಲ್ಲಿ ಕಠಿಣ ಶಿಕ್ಷೆ ವಿಧಿಸಲು ಅವಕಾಶ ನೀಡುವ ಕರಡು ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ ಕೆಲವೇ ಗಂಟೆಗಳಲ್ಲಿ ಎನ್‌ಟಿಎ ಈ ಕ್ರಮ ಕೈಗೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಂಸತ್ ಭವನದ ಸಂಕೀರ್ಣದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ಮಸೂದೆಗೆ ಮಂಜೂರಾತಿ ನೀಡಲಾಗಿದ್ದು, ಮುಂದಿನ ವಾರ ಸಂಸತ್ತಿನಲ್ಲಿ ಮಂಡನೆಯಾಗಲಿದೆ. ಈ ಮಸೂದೆಯು ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ, 2024’ಕ್ಕೆ ತಿದ್ದುಪಡಿ ತರಲಿದ್ದು, ಪೇಪರ್ ಲೀಕ್ ಪ್ರಕರಣಗಳಲ್ಲಿ ಭಾಗಿಯಾದವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಗರಿಷ್ಠ 10 ಕೋಟಿ ರೂ. ದಂಡ ವಿಧಿಸಲು ಪ್ರಸ್ತಾಪಿಸಿದೆ.

Related posts

ಉಡುಪಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಪುಸ್ತಕ ಪ್ರದರ್ಶನ ಉದ್ಘಾಟಿಸಿದ ಪ್ರಾಂಶುಪಾಲ ನಾಗರಾಜ್ ಜಿ. ಎಸ್‌ ;

Voiceoftulunadu

ಗ್ಯಾನ್ ಜಿ ಪಾಲನ್ ಕೊಡವೂರುರವರಿಗೆ “ಇಸ್ಕಾನ್ ವ್ಯಾಲ್ಯೂ ಎಜುಕೇಶನ್” ಪುರಸ್ಕಾರ: ಪ್ರಶಸ್ತಿ ಪತ್ರ ವಿತರಿಸಿದ ಮಂಗಲಯಾನದ ರೂವಾರಿ ಡಾ. ಸೋಮನಾಥ್;

Voiceoftulunadu

ಕೊಂಕಣ ರೈಲ್ವೆಗೆ ರೂ. 199.63 ಕೋಟಿ ನಿವ್ವಳ ಲಾಭ ;

Voiceoftulunadu

Leave a Comment