September 5, 2026
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ನಡೆದ ಬೃಹತ್ ಜಾಗೃತಿ ಕಾರ್ಯಕ್ರಮ: “ಆಪರೇಷನ್ ರೈಸ್” ಹಾಗೂ “ಬೇಡ ಬ್ರೋ” ಎಂಬ ಉಪಕ್ರಮಗಳಡಿಯಲ್ಲಿ ಮಾದಕ ವಸ್ತುಗಳ ವಿರುದ್ದ ಜಾಗೃತಿ ಅಭಿಯಾನದ ಅಂಗವಾಗಿ ನಡೆದ ವಿಶೇಷ ಕಾರ್ಯಕ್ರಮ:

ಮಂಗಳೂರು : “ಆಪರೇಷನ್ ರೈಸ್” ಹಾಗೂ “ಬೇಡ ಬ್ರೋ” ಉಪಕ್ರಮಗಳಡಿ ಮಾದಕ ವಸ್ತುಗಳ ವಿರುದ್ಧ ರಾಜ್ಯವ್ಯಾಪಿ ಜಾಗೃತಿ ಅಭಿಯಾನದ ಅಂಗವಾಗಿ ಇಂದು ಮಂಗಳೂರು ನಗರ ಪೊಲೀಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವತಿಯಿಂದ ಮಂಗಳೂರಿನಲ್ಲಿ ಬೃಹತ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಸನ್ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಯು.ಟಿ. ಖಾದ‌ರ್ ಫರೀದ್ ಅವರು ಉದ್ಘಾಟಿಸಿದರು, ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಿಂದ ಸುಮಾರು 2,000 ವಿದ್ಯಾರ್ಥಿಗಳು, ಶಾಲಾ ಮುಖ್ಯಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಮಾದಕ ವಸ್ತುಗಳ ವಿರುದ್ಧ ಪ್ರತಿಜ್ಞೆ ಸ್ವೀಕರಿಸಿದರು.

ಅಲ್ಲದೆ, ವಿವಿಧ ಇಲಾಖೆಗಳ ತಜ್ಞರು ಭಾಗವಹಿಸಿದ Panel Discussion ಮೂಲಕ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ, ವ್ಯಸನದಿಂದ ದೂರವಿರುವಂತೆ ಸಂದೇಶ ನೀಡಲಾಯಿತು.

Related posts

ವಾಲಿಕುಂಜ ಚಾರಣ : ಒಂದು ರುದ್ರ ರಮಣೀಯ ಅನುಭವ …!

Voiceoftulunadu

ಶಿರ್ವ ಗ್ರಾಪಂಗೆ ಪೂರ್ಣಕಾಲಿಕ ಅಭಿವೃದ್ಧಿ ಅಧಿಕಾರಿ ನೇಮಿಸುವಂತೆ ಮಾಜಿ ಅಧ್ಯಕ್ಷ ಕೆ. ಆರ್ ಪಾಟ್ಕರ್ ಆಗ್ರಹ : ಉಡುಪಿ ಜಿಲ್ಲೆಯ ಅತಿ ದೊಡ್ಡ ಗ್ರಾಮ ಪಂಚಾಯತ್ ಗಳಲ್ಲೊಂದಾದ ಶಿರ್ವ ಗ್ರಾಮ ಪಂಚಾಯತ್;

Voiceoftulunadu

ಬಿ.ಸಿ.ರೋಡ್‌: ಬ್ರಹ್ಮಶ್ರೀ ನಾರಾಯಣಗುರು ವೃತ್ತ ಲೋಕಾರ್ಪಣೆ, ವಿದ್ಯಾರ್ಥಿವೇತನ ವಿತರಣೆ : ವೃತ್ತ ಲೋಕಾರ್ಪಣೆ ಗೈದ ಸಂಸದ ಕ್ಯಾ, ಬ್ರಿಜೇಶ್ ಚೌಟ;

Voiceoftulunadu

Leave a Comment