ಮಂಗಳೂರು : 2028 ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ ಹಾಗೂ ಬೆಳವಣಿಗೆಗಾಗಿ ತುಳುವ ಮಹಾಸಭೆ ಇಂಟರ್ನ್ಯಾಷನಲ್ ಜಾಗತಿಕ ಮಟ್ಟದಲ್ಲಿ ತನ್ನ ಸಂಘಟನಾ ಚಟುವಟಿಕೆಗಳನ್ನು ವಿಸ್ತರಿಸುತ್ತಿದೆ.
ಈ ನಿಟ್ಟಿನಲ್ಲಿ ಕತಾರ್ ಘಟಕದ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ, ಸಮಾಜಸೇವಕ ಹಾಗೂ ಎ.ಟಿ.ಎಸ್. ಗ್ರೂಪ್, ಕತಾರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಮೂಡಂಬೈಲ್ ರವಿ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಮೂಲಕಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾದ ಡಾ. ರವಿ ಶೆಟ್ಟಿ ಅವರು ಬಿ.ಇ. (ಮೆಕಾನಿಕಲ್) ಹಾಗೂ ಎಂ.ಬಿ.ಎ. ಪದವೀಧರರಾಗಿದ್ದು, ಗೌರವ ಡಾಕ್ಟರೇಟ್ ಪದವಿಗೂ ಭಾಜನರಾಗಿದ್ದಾರೆ.
ಕಳೆದ ಎರಡೂವರೆ ದಶಕಗಳಿಂದ ಕತಾರ್ನ ದೋಹಾದಲ್ಲಿ ಯಶಸ್ವಿ ಉದ್ಯಮಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ತಮ್ಮ ಎ.ಟಿ.ಎಸ್. ಗ್ರೂಪ್ ಮೂಲಕ ಸಾವಿರಾರು ಮಂದಿಗೆ, ಅದರಲ್ಲೂ ಹೆಚ್ಚಿನ ಸಂಖ್ಯೆಯ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಿ ಅನೇಕ ಕುಟುಂಬಗಳ ಬದುಕಿಗೆ ಆಸರೆಯಾಗಿದ್ದಾರೆ.ಕತಾರ್ನಲ್ಲಿ ಕನ್ನಡ ಮತ್ತು ತುಳು ಸಂಸ್ಕೃತಿಯ ಪ್ರಚಾರ-ಪ್ರಸಾರಕ್ಕೆ ಅವರು ನೀಡಿರುವ ಗಮನಾರ್ಹವಾಗಿದೆ.
ಯಕ್ಷಗಾನ, ಕಬಡ್ಡಿ ಸೇರಿದಂತೆ ಕರ್ನಾಟಕದ ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸಿ ಬೆಳೆಸುವಲ್ಲಿಸಮಾಜಸೇವೆ ಹಾಗೂ ಉದ್ಯಮಶೀಲತೆಯ ಕ್ಷೇತ್ರದಲ್ಲಿನ ಅವರ ೯ಅವರ ಸಂಘಟನಾ ಸಾಮರ್ಥ್ಯ, ಸಮಾಜಸೇವೆ ಹಾಗೂ ತುಳು-ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯ ಉಳಿವು-ಬೆಳವಣಿಗೆಗೆ ಸಲ್ಲಿಸಿರುವ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಅಂತರರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಸರ್ವೋತ್ತಮ ಶೆಟ್ಟಿ ಅವರು ಡಾ. ಮೂಡಂಬೈಲ್ ರವಿ ಶೆಟ್ಟಿಯವರನ್ನು ಕತಾರ್ ಘಟಕದ ಅಧ್ಯಕ್ಷರಾಗಿ ನೇಮಕಗೊಳಿಸಿದ್ದಾರೆ.
ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ, ಪ್ರಕೃತಿ ವಿಕೋಪ ಪರಿಹಾರ, ವೈದ್ಯಕೀಯ ನೆರವು, ಬಡ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಸಮಾಜದ ದುರ್ಬಲ ವರ್ಗಗಳ ಕಲ್ಯಾಣಕ್ಕಾಗಿ ನಿರಂತರ ಸಮಾಜಸೇವೆ ಸಲ್ಲಿಸುತ್ತಿದ್ದಾರೆ.ಸಾಧನೆಯನ್ನು ಗುರುತಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ-2022, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅಂತರರಾಷ್ಟ್ರೀಯ ಆರ್ಯಭಟ ಪ್ರಶಸ್ತಿ, ಗೌರವ ಡಾಕ್ಟರೇಟ್ ಸೇರಿದಂತೆ ಅನೇಕ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಪ್ರಶಸ್ತಿ-ಪುರಸ್ಕಾರಗಳು ಅವರಿಗೆ ಲಭಿಸಿವೆ.
ಈ ನೇಮಕವನ್ನು ತುಳುವ ಫೌಂಡೇಶನ್ನ ಗೌರವಾಧ್ಯಕ್ಷರಾದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ಸೇವೆ ಅಪಾರವಾಗಿದೆ. ಪ್ರಸ್ತುತ ಕರ್ನಾಟಕ ಸಂಘ ಕತಾರ್ನ ಅಧ್ಯಕ್ಷರಾಗಿ, ತುಳುಕೂಟ ಕತಾರ್ನ ಮಹಾಪೋಷಕರಾಗಿ ಹಾಗೂ ಬಂಟ್ಸ್ ಕತಾರ್ನ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಹಿಂದೆ ತುಳುಕೂಟ ಕತಾರ್ನ ಅಧ್ಯಕ್ಷರಾಗಿ ಮೂರು ಅವಧಿಗಳಲ್ಲಿ ಕಾರ್ಯನಿರ್ವಹಿಸಿ, ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿರುವ ವಿವಿಧ ಸಂಘಟನೆಗಳು, ದೇವಸ್ಥಾನಗಳ ಬ್ರಹ್ಮಕಲಶೋತ್ಸವ ಸಮಿತಿಗಳು ಹಾಗೂ ಅನೇಕ ಸಾಮಾಜಿಕ ಸಂಸ್ಥೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಶ್ರೀಹರಿನಾರಾಯಣ ದಾಸ್ ಅಸ್ರಣ್ಣ ಕಟೀಲ್, ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ಯಗುತ್ತು, ಕಾರ್ಯದರ್ಶಿ ವಸಂತ ರೈ ಕುತ್ತೇತ್ತೂರು, ನಿರ್ದೇಶಕ ಡಾ. ರಾಜೇಶ್ ಕೃಷ್ಣ ಆಳ್ವ ಹಾಗೂ ತುಳುವ ಮಹಾಸಭೆ ಇಂಟರ್ನ್ಯಾಷನಲ್ಲ ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಗಡೆ ಕೊಕ್ರಾಡಿ, ಕೇಂದ್ರೀಯ ಸಮಿತಿ ಅಧ್ಯಕ್ಷ ಬಿ. ಬೆಲ್ವಾಡ ಮತ್ತು ಕೇಂದ್ರೀಯ ಸಮಿತಿ ಸಂಚಾಲಕ ವಿಶ್ವನಾಥ ಆಚಾರ್ಯ ಸ್ವಾಗತಿಸಿ, ಮೂಡಂಬೈಲ್ ರವಿ ಶೆಟ್ಟಿಯವರಿಗೆ ಹೃತ್ತೂರ್ವಕ ಅಭಿನಂದನೆಗಳು ಹಾಗೂ ಶುಭ ಹಾರೈಕೆಗಳನ್ನು ಸಲ್ಲಿಸಿದ್ದಾರೆ.
