September 5, 2026
Uncategorizedಕ್ರೈಮ್ಕ್ರೈಮ್/ಅವಘಡಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಗುಂಡಿನ ದಾಳಿಗೆ ಬಲಿ. ಉದ್ಯಮಿ ಪ್ರಿನ್ಸ್ ಪಾಯಿಂಟ್ ಡೇವಿಡ್ ಡಿಸೋಜಾ ಮೃತಪಟ್ಟವರು;

ವರದಿ/ ಚಿತ್ರ: ಈ ಮೀಡಿಯಾ

ಶಿರ್ವ : ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರರಾದ ಡೇವಿಡ್ ಡಿಸೋಜ ಅವರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಡೇವಿಡ್ ಅವರು ತನ್ನ ಮುದರಂಗಡಿಯ ಕಚೇರಿಗೆ ಕಾರಿನಲ್ಲಿ ಇಳಿದು ನಡೆದುಕೊಂಡು ಹೋಗುತ್ತ ಇರುವಾಗ ಘಟಿಸಿದೆ.

ಮಾಹಿತಿಯ ಪ್ರಕಾರ, ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಡಿಸೋಜ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಅವರನ್ನು ತಕ್ಷಣಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಶಿರ್ವ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ.ಗುಂಡಿನ ದಾಳಿಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಪ್ರಕರಣದ ಕುರಿತು ಉಡುಪಿ ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮುತುವರ್ಜಿಯಲ್ಲಿ ತನಿಖೆ ನಡೆಯುತ್ತಿದೆ.

Related posts

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಸಿಂಗಾಪುರ ಘಟಕದ ಅಧ್ಯಕ್ಷರಾಗಿ ಶ್ರೀ ನಿತ್ಯಾನಂದ ಹೆಗ್ಡೆ ನೇಮಕ ;

Voiceoftulunadu

ಇಂಟರ್ನೆಟ್‌ನಿಂದ ಡಿಪ್‌ಫೇಕ್ (Deepfake) ಚಿತ್ರ ಮತ್ತು ವೀಡಿಯೊಗಳನ್ನು ತೆಗೆದುಹಾಕುವುದು ಹೇಗೆ?

Voiceoftulunadu

ಕಿನ್ನಿಗೋಳಿ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾ ಸಮಾರಂಭಅಕಾಡೆಮಿ ಸಾಹಿತ್ಯಕ್ಕೆ ಮೀಸಲಾಗಬೇಡಿ, ಸಂಸ್ಕೃತಿ, ಸಂಸ್ಕಾರ ಪಸರಿಸಿ: ಶಾಸಕ ಉಮಾನಾಥ ಕೋಟ್ಯಾನ್

Voiceoftulunadu

Leave a Comment