ವರದಿ/ ಚಿತ್ರ: ಈ ಮೀಡಿಯಾ
ಮೂಡುಬೆಳ್ಳೆ: ಮೂಡುಬೆಳ್ಳೆ ಸೈಂಟ್ ಲಾರೆನ್ಸ್ ಶಾಲಾ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಶುಕ್ರವಾರ ನೆರವೇರಿತು.ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ದೇವದಾಸ್ ಹೆಬ್ಬಾರ್ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿ ಯಾಗಿ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ ಭಾಗವಹಿಸಿದ್ದು, ಸ್ವಾಸ್ಥ್ಯ ಸಂಕಲ್ಪ ಕುರಿತು ದುಷ್ಟಟ ಮುಕ್ತ ಸಮಾಜ ನಿರ್ಮಾಣದಲ್ಲಿ ಮಕ್ಕಳ ಪಾತ್ರ ಮುಖ್ಯ ಎನ್ನುವ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ, ಕೇಂದ್ರ ಒಕ್ಕೂಟದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಒಕ್ಕೂಟದ ಅಧ್ಯಕ್ಷೆ ದೀಪ, ಸುಜಾತಾ ಸುವರ್ಣ, ಮೇಲ್ವಿಚಾರಕ ವಿನಯ ಹಾಗೂ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿವಾನಂದ, ಸೇವಾ ಪ್ರತಿನಿಧಿ ದಿವ್ಯ,ಒಕ್ಕೂಟ ಪದಾಧಿಕಾರಿಮೂಡುಬೆಳ್ಳೆ ಸೈಂಟ್ ಲಾರೆನ್ಸ್ ಶಾಲಾ ಪ್ರಾಂಶುಪಾಲೆ ಸ್ಯಾಂಡ್ರಾ ಮೇಡಂ ವಂದಿಸಿದರು.
