ವರದಿ/ ಚಿತ್ರ :ಈ ಮೀಡಿಯ
ಉಡುಪಿ: ಪರ್ಕಳದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ವಾಲಿಬಾಲ್ ಫ್ರೆಂಡ್ಸ್ ತಂಡದ ನೂತನ ಲೋಗೊ ಬಿಡುಗಡೆ ಕಾರ್ಯಕ್ರಮವು ಮಹಾಲಿಂಗೇಶ್ವರ ಪರ್ಕಳ ಮಹಾಗಣಪತಿ ಸಭಾಂಗಣದಲ್ಲಿ ನಡೆಯಿತು. ದೇವಸ್ಥಾನದಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ವಾಲಿಬಾಲ್ ಫ್ರೆಂಡ್ಸ್ ತಂಡವು ಹಲವು ವರ್ಷಗಳಿಂದ ಸಮಾಜಮುಖಿ ಹಾಗೂ ಸೇವಾ ಕಾರ್ಯಗಳಲ್ಲಿತೊಡಗಿಸಿಕೊಂಡಿದೆ.
ದೇವಸ್ಥಾನದ ವಾರ್ಷಿಕ ಜಾತ್ರೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತಂಡದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಸೇವೆ ಸಲ್ಲಿಸುತ್ತಿದ್ದಾರೆ.ಗ್ರಾಮದಲ್ಲಿ ನಡೆಯುವ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಸಹಕಾರ ನೀಡುತ್ತಿದ್ದಾರೆ. ಕಾರ್ಯಕ್ರಮಗಳಲ್ಲೂ ತಂಡದ ಸದಸ್ಯರುತಂಡವನ್ನು ಅಧಿಕೃತವಾಗಿ ನೋಂದಾಯಿಸುವ ಹಿನ್ನೆಲೆಯಲ್ಲಿನೂತನ ಲೋಗೊವನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮುರಳೀಧರ ನಕ್ಷತ್ರಿ, ದಿಲೀಪ್ ರಾಜ್ ಹೆಗ್ಡೆ, ರಾಮದಾಸ್ ಹೆಗ್ಡೆ, ಜಯರಾಜ್ ಹೆಗ್ಡೆ, ದಿನೇಶ್ ಹೆಗ್ಡೆ ಆತ್ರಾಡಿ, ಗಣೇಶ್ ಪಾಟೀಲ್, ಭಾಸ್ಕರ ದೇವಾಡಿಗ, ಪದ್ಮನಾಭ ಬಾಯರಿ, ಸುಖಾನಂದ ಶೆಟ್ಟಿ, ಸುಧೀರ್ ಶೆಟ್ಟಿಗಾರ್ ಹಾಗೂ ವಾಲಿಬಾಲ್ ಫ್ರೆಂಡ್ಸ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು. ಶೆಟ್ಟಿಗಾರ್, ಕೀರ್ತಿ ಕುಮಾರ್, ಸುಧೀರ್ ಶೆಟ್ಟಿಗಾರ್ ಹಾಗೂ ವಾಲಿಬಾಲ್ ಫ್ರೆಂಡ್ಸ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು.
