ಕೃಪೆ: ವಿಕೆ
ಮಂಗಳೂರು : ಸಂವಿಧಾನಬದ್ಧವಾಗಿ ಕೆಲಸ ಮಾಡಬೇಕಾದ ಚುನಾವಣಾ ಆಯೋಗ, ಅಡಳಿತರೂಢ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ.
ನೀತಿ ಸಂಹಿತೆ ಉಲ್ಲಂಘನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ಆಯೋಗ ತೋರುತ್ತಿರುವ ತಾರತಮ್ಯ, ವಿಪಕ್ಷಗಳ ದೂರುಗಳ ವ್ಯವಸ್ಥಿತ ಕಡೆಗಣನೆ ಹಾಗೂ ಆಡಳಿತ ಪಕ್ಷಕ್ಕೆ ಅನುಕೂಲಕರವಾಗಿ ರೂಪಿಸಲಾಗುವ ಚುನಾವಣಾ ವೇಳಾಪಟ್ಟಿಯಿಂದಾಗಿ ಇಡೀ ಸಂಸ್ಥೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಧೂಳೀಪಟವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಆರೋಪಿಸಿದರು.
ಸೋಮವಾರ ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಮತ್ತು ಎಸ್‌ಐಆರ್ ಪ್ರಕ್ರಿಯೆಯ ಅಕ್ರಮಗಳನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಬಂಧನಕ್ಕೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಮಂಗಳೂರು ವತಿಯಿಂದ ಪಂಪ್‌ವೆಲ್ ಮಹಾವೀರ ವೃತ್ತದಿಂದ ಜಿಲ್ಲಾ ಚುನಾವಣಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮತ್ತುಕರ್ನಾಟಕ ಪ್ರದೇಶ?ಎಸ್‌ಐಆರ್ ಪ್ರಕ್ರಿಯೆಯ ಅಕ್ರಮಗಳನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪಂಪ್‌ವೆಲ್ ಮಹಾವೀರ ವೃತ್ತದಿಂದ ಜಿಲ್ಲಾ ಚುನಾವಣಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಯಿತು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ವಿಧಾನಪರಿಷತ್ ಸದಸ್ಯರಾದ ಪಿ.ವಿ.ಮೋಹನ್, ಐವನ್ ಡಿಸೋಜ ಇದ್ದರು.ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ಸಾಂವಿಧಾನಿಕ ಸ್ವಾಯತ್ತೆಯನ್ನು ಗಾಳಿಗೆ ತೂರಿ ಕರ್ತವ್ಯಲೋಪ ಎಸಗಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು ಹಾಗೂ ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿರುವ ಅವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ವಿಧಾನಪರಿಷತ್ ಸದಸ್ಯರಾದ ಪಿ.ವಿ.ಮೋಹನ್, ಐವನ್ಡಿಸೋಜ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.ಲೋಬೋ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ಎಂ.ಎಸ್. ಮಹಮ್ಮದ್. ಹೇಮನಾಥ ಶೆಟ್ಟಿ ಕಾವು, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್, ಮುಡಾ ಮಾಜಿ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಾಜಿ ಮೇಯರ್ಗಳಾದ ಶಶಿಧರ ಹೆಗ್ಡೆ ಇದ್ದರು.ಲೋಕಸಭೆಯವಿಪಕ್ಷ ನಾಯಕ ರಾಹುಲ್ ಗಾಂಧಿ ಎತ್ತಿರುವ ಧ್ವನಿ ಕೇವಲ ರಾಜಕೀಯ ಆರೋಪವಲ್ಲ, ಅದು ಸಂವಿಧಾನ ಮತ್ತು ಪ್ರಜಾತಂತ್ರದ ಅಸ್ತಿತ್ವದ ಹೋರಾಟ.

ಸ್ವತಃ ಚುನಾವಣಾ ಆಯೋಗದ ಆಯುಕ್ತರೇ ಮತದಾರರ ಪಟ್ಟಿ ಪರಿಷ್ಕರಣೆಯ ಲೋಪಗಳ ಕುರಿತು ಹದಿನಾಲ್ಕಕ್ಕೂ ಹೆಚ್ಚು ಬಾರಿ ಆಕ್ಷೇಪಣೆ ದಾಖಲಿಸಿರುವ ಸಂಗತಿ ಮಾಧ್ಯಮಗಳಿಂದ ಬಯಲಾಗಿದೆ. ವೋಟ್ ಚೋರಿ ಆರೋಪಗಳ ಕುರಿತು ಸಮಗ್ರ ತನಿಖೆ ನಡೆದು ಜನರ ಮತದಾನದ ಹಕ್ಕಿಗೆ ಸೂಕ್ತ ರಕ್ಷಣೆ ಸಿಗುವವರೆಗೂ ಈ ಹೋರಾಟ ನಿಲ್ಲದು.| ಪದ್ಮರಾಜ್ ಆರ್.ಪೂಜಾರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ
