November 3, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ-ಉಚ್ಚಿಲ ದಸರಾ ಮಹೋತ್ಸವದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭಾಗಿ : ಮೊಗವೀರ ಕುಲಗುರು ಶ್ರೀ ಮಾಧವ ಮಂಗಲ ಗುರುಗಳ ಕಂಚಿನ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದ ಬಿಕೆ. ಎಚ್ ;

ವರದಿ/ ಚಿತ್ರ : ಈ ಮೀಡಿಯಾ

ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ ಮಹೋತ್ಸವಕ್ಕೆ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅವರು ಶ್ರೀ ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಮೊಗವೀರ ಕುಲಗುರು ಶ್ರೀ ಮಾಧವ ಮಂಗಲ ಗುರುಗಳ ಕಂಚಿನ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದರು.ಬಳಿಕ ನಡೆದ ಕಾರ್ಯಕ್ರಮದಲ್ಲಿ ದಸರಾ ಮಹೋತ್ಸವದ ರೂವಾರಿ ನಾಡೋಜ ಡಾ. ಜಿ. ಶಂಕರ್ ಅವರಿಂದ ಅಭಿನಂದನೆ ಸ್ವೀಕರಿಸಿದರು.

ಈ ಸಂದರ್ಭ ಮಾತನಾಡಿದ ໖.. ಹರಿಪ್ರಸಾದ್, ಮೊಗವೀರ ಸಮುದಾಯದಲ್ಲಿ ಗಂಡು-ಹೆಣ್ಣಿನಸಮಾನತೆಗೆ ಮೀನುಗಾರಿಕೆ ವೃತ್ತಿಯೇ ಸಾಕ್ಷಿಯಾಗಿದೆ. ಮೀನುಗಾರಿಕೆಯಲ್ಲಿ ಪುರುಷರು ಮೀನು ಹಿಡಿದು ತಂದರೆ, ಮಹಿಳೆಯರು ಅವುಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಕುಟುಂಬದ ಜೀವನ ನಿರ್ವಹಣೆಗೆ ಕೊಡುಗೆ ನೀಡುತ್ತಾರೆ. ಈ ರೀತಿಯ ಪರಸ್ಪರ ಸಹಕಾರ ಹಾಗೂ ಸಮಾನತೆಯ ಬದುಕನ್ನು ಮೊಗವೀರ ಸಮುದಾಯದಲ್ಲಿ ಕಾಣಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಪ್ರಸಾದ್ ರಾಜ್ ಕಾಂಚನ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಮೋಹನ್ ಬೇಂದ್ರೆ, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಗಿರಿಧರ ಸುವರ್ಣ, ಉಡುಪಿ ಉಚ್ಚಿಲ ದಸರಾಸಮಿತಿ ಅಧ್ಯಕ್ಷ ವಿನಯ್ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನೀಲ್, ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಕವಿತಾ ಶರತ್, ದ.ಕ. ಮೊಗವೀರ ಮಹಾಜನ ಸಂಘದ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಜತೆ ಕಾರ್ಯದರ್ಶಿ ಸುಜಿತ್ ಸಾಲ್ಯಾನ್, ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂದ‌ರ್, ನಾಲ್ಕುಪಟ್ಟ ಮೊಗವೀರ ಸಂಘದ ಅಧ್ಯಕ್ಷ ಮನೋಜ್ ಕಾಂಚನ್, ಮಹಿಳಾ ಸಂಘ ಅಧ್ಯಕ್ಷೆ ಸುಗುಣ ಕರ್ಕೇರ, ಪ್ರಬಂಧಕಸತೀಶ್ ಅಮೀನ್ ಪಡುಕರೆ, ಅಶೋಕ್ ಕುಮಾರ್ ಕೊಡವೂರು, ಕಿಶನ್ ಹೆಗ್ಡೆ ಹಾಗೂ ರಕ್ಷಿತ್ ಶಿವರಾಂ ಉಪಸ್ಥಿತರಿದ್ದರು.

Related posts

ಪವಿತ್ರ ತುಳುನಾಡಿನ ದೈವರಾಧನೆ – ಮೂಲವನ್ನ ಮರೆಯದಿರಿ: ಸಾವಿರ ವರ್ಷಗಳ ನಂಬಿಕೆ, ಕುಟುಂಬದ ಬೇರು;

Voiceoftulunadu

ಬಂಟರು ಬಿಪಿಎಲ್ ಕಾರ್ಡ್‌ನಿಂದ ಮುಕ್ತಿ ಪಡೆಯಬೇಕು: ಬರೋಡ ಶಶಿಧರ ಶೆಟ್ಟಿಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆ ;

Voiceoftulunadu

ಡಾ. ಜಿ.ಪರಮೇಶ್ವರ್ ಅವರು ತಮ್ಮ ವ್ಯಕ್ತಿತ್ವದಿಂದ ಶ್ರೀಮಂತರು : ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ;

Voiceoftulunadu

Leave a Comment