November 4, 2026
Uncategorizedಕೃಷಿ/ಭೌಗೋಳಿಕಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯವಾಣಿಜ್ಯ/ಉದ್ಯಮಸ್ಥಳೀಯ/ಪ್ರಾದೇಶಿಕ ಸುದ್ದಿ

ಪೊಳಲಿ: ಕ್ಷೇತ್ರದಲ್ಲಿ ₹1.50 ಕೋಟಿ ವೆಚ್ಚದಲ್ಲಿ ಗೋಶಾಲೆ ನಿರ್ಮಾಣಕ್ಕೆ ಸಿದ್ಧತೆ;

ವರದಿ/ ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವತಿಯಿಂದ ಫಲ್ಗುಣಿ ನದಿ ತಟದ ಪಡ್ಯಾಪುವಿನ 15 ಎಕರೆ ಪ್ರದೇಶದಲ್ಲಿ ₹1.50 ಕೋಟಿ ವೆಚ್ಚದಲ್ಲಿ ಗೋಶಾಲೆ ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ. ಕಾಮಗಾರಿಯ ಭೂಮಿಪೂಜೆಯನ್ನು ಶೀಘ್ರದಲ್ಲೇ ನೆರವೇರಿಸಲು ಉದ್ದೇಶಿಸಲಾಗಿದೆ.

ಈ ಯೋಜನೆಗೆ ಸಂಬಂಧಿಸಿದಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ನೇತೃತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಗೋಶಾಲೆಯ ನಿರ್ಮಾಣ ಕಾಮಗಾರಿಯ ನೀಲನಕ್ಷೆಯನ್ನು ಪರಿಶೀಲಿಸಿ, ಕಾಮಗಾರಿ ಆರಂಭಿಸುವ ಕುರಿತು ಚರ್ಚಿಸಲಾಯಿತು.

ಯೋಜನೆಯಡಿ ಗೋಶಾಲೆಯೊಂದಿಗೆ ಸ್ನಾನಘಟ್ಟ, ಕಾರ್ಮಿಕರಿಗೆ ವಸತಿ ವ್ಯವಸ್ಥೆಹಾಗೂ ಗೋದಾಮು ನಿರ್ಮಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಪ್ಪಂದವೂ ಅಂತಿಮಗೊಂಡಿದೆ.

ಕಾಮಗಾರಿ ಆರಂಭಿಸಲು ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ.ಸಭೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಕಾರ್ಯನಿರ್ವಹಣಾಧಿಕಾರಿ ಚಂದ್ರಮೋಹನ್, ಇಂಜಿನಿಯರ್ ಲಕ್ಷ್ಮಣ್ ಪೂಜಾರಿ ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು

Related posts

ಬೆಳಪು : ನಂದಿಗೋಣ ಪರಿವಾರ ಕ್ಷೇತ್ರದ ಸಮಗ್ರ ಜೀರ್ಣೋದ್ಧಾರಕ್ಕೆ ಪ್ರಶ್ನಾಚಿಂತನೆ. ಕೇರಳದ ಪ್ರಸಿದ್ದ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ಅವರ ಮೂಲಕ ನಡೆದ ಪ್ರಶ್ನಾಚಿಂತನೆ ;

Voiceoftulunadu

ಕರಾವಳಿಯಲ್ಲಿ ಸೈಲೆಂಟ್ ತಂಪ್: ಬೆಂಗಳೂರಿನಲ್ಲಿ ರಾಯಲ್ ಎನ್‌ಫೀಲ್ಡ್ ಇವಿ ಬೈಕ್ ವಿತರಣೆ ಆರಂಭ; ಶೀಘ್ರದಲ್ಲೇ ಮಂಗಳೂರಿಗೆ ‘ಫ್ಲೈಯಿಂಗ್ ಫ್ಲೀ C6’ ಲಗ್ಗೆ!

Voiceoftulunadu

ಉಡುಪಿ ಉಚ್ಚಿಲ ದಸರಾ : ಅಬ್ಬರದ ಪಿಲಿ ಪಂಥ – ಪುರುಷರ ಹುಲಿವೇಷ ಸ್ಪರ್ಧೆಸಾಮೂಹಿಕ ಕುಣಿತ ಭಜನೆ ಉದ್ಘಾಟಿಸಿದ ನಾಡೋಜ ಡಾ. ಜಿ ಶಂಕರ್ ;

Voiceoftulunadu

Leave a Comment