November 4, 2026
Uncategorizedಆರೋಗ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸುಮನಸಾ ಕೊಡವೂರು : ರಜತ ಸಂಭ್ರಮದ ಸರಣಿ ಕಾರ್ಯಕ್ರಮ, ಆರೋಗ್ಯವಂತ ಪ್ರಜೆಯಿಂದ ಸಮೃದ್ದ ಸಮಾಜ ನಿರ್ಮಾಣ : ಹರಿಪ್ರಸಾದ್ ರೈ ;

ವರದಿ /ಚಿತ್ರ :;ಈ ಮೀಡಿಯಾ

ಉಡುಪಿ: ಆರೋಗ್ಯವಂತ ಪ್ರಜೆಯು ರಾಜ್ಯ ಮತ್ತು ದೇಶವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾನೆ. ಆರೋಗ್ಯವಂತ ವ್ಯಕ್ತಿಗಳಿಂದ ದೇಶ ಸುಭಿಕ್ಷವಾಗಿರುತ್ತದೆ ಎಂದು ಸುಮನಸಾ ಕೊಡವೂರು ರಜತ ಸಂಭ್ರಮ ಸಮಿತಿ ಅಧ್ಯಕ್ಷ ಹರಿಪ್ರಸಾದ್ ರೈ ಹೇಳಿದರು.

ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ರಜತ ಸಂಭ್ರಮದ ಸರಣಿ ಕಾರ್ಯಕ್ರಮಗಳ ಪ್ರಯುಕ್ತ ಕೊಡವೂರಿನಲ್ಲಿ ಹಮ್ಮಿಕೊಂಡಿದ್ದ ವೈದ್ಯಕೀಯ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕಾಯಿಲೆ ಬಂದ ಮೇಲೆ ಚಿಕಿತ್ಸೆ ಪಡೆಯುವುದು ಇದ್ದೇ ಇದೆ. ಕಾಯಿಲೆ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಮತ್ತು ಆರೋಗ್ಯವಾಗಿರುವುದು ಅತ್ಯಂತ ಮುಖ್ಯವಾದುದು.

ಕಾಲಕಾಲಕ್ಕೆ ಆರೋಗ್ಯ ತಪಾಸಣೆಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು.ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಶಿಬಿರದಲ್ಲಿ ವಿಶೇಷವಾಗಿ ಉಚಿತ ಮ್ಯಾಮೋಗ್ರಾಫಿ ತಪಾಸಣೆಯ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ತಿಳಿಸಿದರು.ಸಮಾಜಸೇವೆ, ಕಲೆ, ಸಾಹಿತ್ಯ, ರಂಗಭೂಮಿ ಕ್ಷೇತ್ರಗಳಲ್ಲಿ ಉಡುಪಿ ಸಾಂಸ್ಕೃತಿಕ ಲೋಕಕ್ಕೆ ತನ್ನದೇ ಕೊಡುಗೆ ನೀಡುತ್ತಿರುವ ಸುಮನಸಾ ಕೊಡವೂರು ಸಂಸ್ಥೆ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ವಿವರಿಸಿದರು.

ಸಾಮಾಜಿಕ ಕಾರ್ಯಕರ್ತ ಜನಾರ್ದನ ಕೊಡವೂರು ಮಾತನಾಡಿ, ‘ಆರೋಗ್ಯ ಮತ್ತು ಶಿಕ್ಷಣವನ್ನು ಉಚಿತವಾಗಿ ನೀಡಿದರೆ ಸಮಾಜದ ಸ್ವಾಸ್ಥ್ಯವು ಅತ್ಯುತ್ತಮವಾಗಿ ರೂಪುಗೊಳ್ಳುತ್ತದೆ. ಸರ್ಕಾರಗಳು ಈ ಕೆಲಸ ಮಾಡುವ ಮೂಲಕ ಜನರ ಬದುಕಿನಲ್ಲಿ ಭರವಸೆಯ ಬೆಳಕನ್ನು ಮೂಡಿಸಬೇಕು. ಆದರೆ, ಸರ್ಕಾರಗಳು ಮಾಡುತ್ತಿಲ್ಲ. ಇಂತಹ ಕೆಲಸಗಳನ್ನು ಸಮಾಜಮುಖಿ ಸಂಘ-ಸಂಸ್ಥೆಗಳು ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.

25 ವರ್ಷ ತುಂಬಿರುವ ಸಂಘ ಸಂಸ್ಥೆಗಳು 20-25 ಕಾರ್ಯಕ್ರಮಗಳನ್ನು ಮಾಡುತ್ತವೆ. ಅವುಗಳಿಗಿಂತ ಭಿನ್ನವಾಗಿ ಸುಮನಸಾ ಕೊಡವೂರು ಸಂಸ್ಥೆಯು ಪ್ರತಿ ತಿಂಗಳು ಮೂರ್ನಾಲ್ಕು ಕಾರ್ಯಕ್ರಮಗಳನ್ನು ಮಾಡುತ್ತಿದೆ ಎಂದು ಶ್ಲಾಘಿಸಿದರು.ಉದ್ಯಮಿ ನಾಗರಾಜ ಸುವರ್ಣ ಶಿಬಿರವನ್ನು ಉದ್ಘಾಟಿಸಿದರು.

ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಕೆ.ಎಂ.ಸಿ ಮಣಿಪಾಲ ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಜಾರ್ಜ್, ಭಾರತೀಯ ಕ್ಯಾನ್ಸರ್ ಸೊಸೈಟಿಯ ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಸುನಿತಾ, ಶಿಬಿರದ ಸಂಯೋಜಕರಾದ ಮುರುಗೇಶ್, ಜಗದೀಶ್ ಚೆನ್ನಂಗಡಿ ಉಪಸ್ಥಿತರಿದ್ದರು.ಯೋಗೀಶ್ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು.

ಉಡುಪಿ ಜಿಲ್ಲಾ ಆಸ್ಪತ್ರೆ, ಕೆಎಂಸಿ ಮಣಿಪಾಲ, ಉಡುಪಿಯ ಆದರ್ಶ ಆಸ್ಪತ್ರೆ, ಮಣಿಪಾಲದ ದಂತ ಮಹಾ ವಿದ್ಯಾಲಯ, ಮಣಿಪಾಲದ ಎಚ್ಛಿಆರ್ ಗ್ರೂಪ್ ಸಹಯೋಗದಲ್ಲಿ ನಡೆದ ಈ ಶಿಬಿರದಲ್ಲಿ ನೂರಾರು ಜನರು ಇಸಿಜಿ, ರಕ್ತದೊತ್ತಡ ಪರೀಕ್ಷೆ, ಹಿಮೋಗ್ಲೋಬಿನ್ ಪ್ರಮಾಣ ತಪಾಸಣೆ, ದಂತ ತಪಾಸಣೆ, ಗರ್ಭಕಂಠದ ಕ್ಯಾನ್ಸರ್ ತಪಾಸಣೆ, ಸ್ತನ ಕ್ಯಾನ್ಸರ್ ಪರೀಕ್ಷೆ, ಚರ್ಮರೋಗ, ಮೂಳೆ ಸಾಂದ್ರತೆ, ಕಿವಿ, ಮೂಗು, ಗಂಟಲು ತಪಾಸಣೆ, ಕಣ್ಣು ತಪಾಸಣೆ ಮಾಡಿಸಿಕೊಂಡರು.

Related posts

ವಿ ವಿ ಕಾಲೇಜು ಪ್ರಾಂಶುಪಾಲರಾಗಿ ಡಾ. ಜಯವಂತ ನಾಯಕ್:

voiceoftulunadu

ತುಂಬೆ: ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ತುಂಬೆ ವಿದ್ಯಾಸಂಸ್ಥೆ: ಮಮತಾ ಗಟ್ಟಿ;

Voiceoftulunadu

ಉಡುಪಿ ದೊಡ್ಡಣ ಗುಡ್ಡೆಯ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನನವರಾತ್ರಿ : ಕಲಾವಿದವರನ್ನು ಗೌರವಿಸಿದ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ;

Voiceoftulunadu

Leave a Comment