ವರದಿ /ಚಿತ್ರ: ಈ ಮೀಡಿಯಾ
ಶಂಕರಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಬೆಳ್ಳಿ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ ಶಂಕರಪುರ ಬಿಎಂಜೆ ಸಭಾಭವನದಲ್ಲಿ ಮಂಗಳವಾರ ನಡೆಯಿತು.ತರಬೇತಿ ಕಾರ್ಯಾಗಾರವನ್ನು ಜನಜಾಗೃತಿ ವೇದಿಕೆಯ ಮಾಜಿಜಿಲ್ಲಾಧ್ಯಕ್ಷ ನವೀನ್ ಅಮೀನ್ ಶಂಕರಪುರ ಉದ್ಘಾಟಿಸಿದರು.
ತರಬೇತಿ ಕಾರ್ಯಾಗಾರದಲ್ಲಿ ನೂತನ ಪದಾಧಿಕಾರಿಗಳ ಜವಾಬ್ದಾರಿ, ನಾಯಕನ ಗುಣಗಳು ಹಾಗೂ ಯೋಜನೆಯ ಕಾರ್ಯಕ್ರಮ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮ ಗಳ ಅನುಷ್ಠಾನ ಬಗ್ಗೆ ವಿಚಾರ ವಿನಿಮಯ ನಡೆಯಿತು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ, ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ, ಸುಭಾಸ್ ನಗರ ಒಕ್ಕೂಟದ ಅಧ್ಯಕ್ಷ ಭುವನೇಶ್, ಮೇಲ್ವಿಚಾರಕಿ ಸರಿತ ಹಾಗೂ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.
