November 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೊಡಂಕಾಪು: ಇನ್ಫೆಂಟ್ ಜೀಸಸ್ ಶಾಲೆಯಲ್ಲಿ ವಿಜ್ಞಾನ, ಚಿತ್ರಕಲೆ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ;

ವರದಿ / ಚಿತ್ರ : ಸಂತೋಷ್ ಕುಲಾಲ್ ನೆತ್ತರಕೆರೆ

ಬಂಟ್ವಾಳ: ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿಗಳು, ಚಿತ್ರಕಲೆ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

ಶಾಲಾ ಸಂಚಾಲಕರಾದ ಫಾದರ್ ವಿಕ್ಟರ್ ಡಿ’ಸೋಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾರ್ಮೆಲ್ ಪ್ರೌಢಶಾಲೆಯ ರಾಜ್ಯ ಪ್ರಶಸ್ತಿ ವಿಜೇತ ವಿಜ್ಞಾನ ಶಿಕ್ಷಕ ರೋಷನ್ ಪಿಂಟೋ ಹಾಗೂ ಪೊಳಲಿ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಮುರಳೀಧರ ಆಚಾರ್ಯ ಭಾಗವಹಿಸಿದ್ದರು.

ಇನ್ಫೆಂಟ್ ಜೀಸಸ್ ಚರ್ಚಿನ ಸಹಾಯಕ ಧರ್ಮಗುರು ಫಾದರ್ ಪ್ರಮೋದ್ ಕ್ರಾಸ್ತಾ, ಶಾಲಾ ಮುಖ್ಯ ಶಿಕ್ಷಕ ಫಾದರ್ ಮೆಲ್ವಿನ್ ಲೋಬೋ, ಶಿಕ್ಷಕ-ರಕ್ಷಕ ಸಂಘದ ಕಾರ್ಯದರ್ಶಿಡೇನಿಯಲ್ ಡಿ’ಸಿಲ್ವಾ ಹಾಗೂ ಸಹಾಯಕ ಮುಖ್ಯೋಪಾಧ್ಯಾಯಿನಿ ಗ್ಲಾಡಿಸ್ ಡಿ’ಸೋಜಾ ಉಪಸ್ಥಿತರಿದ್ದರು.

ಐದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿ, ಅವುಗಳ ಕಾರ್ಯವೈಖರಿಯನ್ನು ವಿವರಿಸಿದರು. ವಿದ್ಯಾರ್ಥಿಗಳು ಸ್ವತಃ ತಯಾರಿಸಿದ ವಿವಿಧ ಕರಕುಶಲ ವಸ್ತುಗಳು ಹಾಗೂ ಚಿತ್ರಕಲೆಗಳು ಪ್ರದರ್ಶನದ ಆಕರ್ಷಣೆಯಾಗಿದ್ದವು.

ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ಕುಮಾರಿ ಸೀಹೋನ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ವರ್ಷಾ ಸ್ವಾಗತಿಸಿ, ಕುಮಾರಿ ಮಹೀರಾ ವಂದಿಸಿದರು.

Related posts

ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಪಂಚಾಶತ್ ಜನ್ಮ ವೈಭವ ಶ್ರೀ ಕ್ಷೇತ್ರದಲ್ಲಿ ನಡೆದ ಪತ್ರಿಗೋಷ್ಠಿಯಲ್ಲಿ ಕ್ಷೇತ್ರದ ಭಕ್ತಿ ಶ್ರೀಮತಿ ಗೀತಾಂಜಲಿ ಸುವರ್ಣರಿಂದ ಮಾಹಿತಿ ;

Voiceoftulunadu

ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಹುಟ್ಟು ಹಬ್ಬದ ಸಂಭ್ರಮಕ್ಕೆ ವಿಶೇಷ ತಯಾರಿ ;

Voiceoftulunadu

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ 28ನೇ ವರ್ಷದ ಭಜನಾ ಕಮ್ಮಟ’ಕ್ಕೆ ಚಾಲನೆ : ಭಜನಾ ಕಮ್ಮಟವನ್ನು ಉದ್ಘಾಟಿಸಿದ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ;

Voiceoftulunadu

Leave a Comment