November 3, 2026
Uncategorizedಕ್ರೈಮ್ಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬ್ರಹ್ಮಾವರ: ಬೈಕಾಡಿಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ ;

ವರದಿ/ ಚಿತ್ರ: ವಿನೋದ್ ಶೆಟ್ಟಿ ಉಡುಪಿ

ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ಮಂಗಳವಾರ (ಅ.27) ರಾತ್ರಿ ರೌಡಿ ಶೀಟರ್’ನನ್ನು ರಾಡ್‌‌ನಿಂದ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬೈಕಾಡಿಯ ಸುಜಿತ್ ಪಿಂಟೋ ಎಂದು ಗುರುತಿಸಲಾಗಿದೆ.

ಈತ ಹಲವಾರು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಸುಜಿತ್ ಪಿಂಟೋನನ್ನು ಕರೆಸಿ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಲಾಗಿದೆ. ಮೂಲತಃ ಕಲ್ಯಾಣಪುರದವರಾದ ಅವರು, ಪ್ರಸ್ತುತ ಬೈಕಾಡಿಯಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದರು.ಬೈಕಾಡಿಯ ಪ್ರಮೋದ್ ಪೂಜಾರಿ ಕೊಲೆಗೈದ ಆರೋಪಿ ಎಂದು ತಿಳಿದುಬಂದಿದೆ.

ಮೃತ ರೌಡಿ ಶೀಟರ್ ಸುಜಿತ್ ಪಿಂಟೋ ಮಣಿಪಾಲದ ಬಾರ್‌ನಲ್ಲಿ ಕ್ರಿಮಿನಲ್ ಹಿನ್ನೆಲೆಯ ಗುರುಭಟ್‌ನ ಹಾಡುಹಗಲೇ ಹತ್ಯೆ, ಹಿರಿಯಡ್ಕ ಕೋಟ್ನಕಟ್ಟೆಯಲ್ಲಿ ನಡೆದ ರೌಡಿಶೀಟರ್ ಪ್ರವೀಣ್‌ ಕುಲಾಲ್ ಕೊಲೆಗೆ ಸುಜಿತ್ ಪಿಂಟೋ ಸುಪಾರಿ ನೀಡಿದ್ದ. ಇದೇ ರೀತಿ ಹಲವು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದ.

ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಡಿವೈಎಸ್ಪಿ ಬೆಳ್ಳಿಯಪ್ಪ ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.ಸುಜಿತ್ ಪಿಂಟೊ ಮನೆಗೆ ದಿನಾಸಿ ಸಾಮಾಗ್ರಿ ಪೂರೈಕೆ ಮಾಡುವ ರಿಕ್ಷಾ ಚಾಲಕ ಪ್ರಮೋದ್ ಕೊಲೆ ಆರೋಪಿ ಎಂದು ಪೊಲೀಸರು ತಿಳಿಸಿದ್ದು, ಆತನನ್ನು ಬಂಧಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ರೌಡಿಶೀಟರ್ ಸುಜಿತ್ ಪಿಂಟೊ ರಿಕ್ಷಾ ಚಾಲಕ ಪ್ರಮೋದ್ ಗೆ ಹಣ ನೀಡಲು ಬಾಕಿ ಇದ್ದು ಇದೇ ಕಾರಣಕ್ಕೆ ಪ್ರಮೋದ್ ಸುಜಿತ್ ಪಿಂಟೋನನ್ನು ತಾನು ಇರುವ ಸ್ಥಳಕ್ಕೆ ಬರುವಂತೆ ಕರೆದಿದ್ದನು. ಅದರಂತೆ ಸುಜಿತ್ ಪಿಂಟೊ ಅಲ್ಲಿಗೆ ಹೋಗಿದ್ದು ಇಬ್ಬರು ಮದ್ಯದ ಅಮಲಿನಲ್ಲಿ ಹೊಡೆದಾಟ ಮಾಡಿಕೊಂಡಿದ್ದರೆನ್ನಲಾಗಿದೆ. ಈ ವೇಳೆ ಸಿಟ್ಟಿಗೆದ್ದ ಪ್ರಮೋದ್ ಕಬ್ಬಿಣದ ರಾಡಿನಿಂದ ಸುಜಿತ್ ಪಿಂಟೊನ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಅಧೀಕ್ಷಕ‌ ಹರಿರಾಂ ಶಂಕರ್ ತಿಳಿಸಿದ್ದಾರೆ.

Related posts

ಗ್ರಾಹಕರಿಗೆ ನೀಡುವ ಪ್ರಾಮಾಣಿಕ ಸೇವೆಯಿಂದ ಆತ್ಮತೃಪ್ತಿ ಲಭಿಸಲಿದೆ: ಪ್ರಭಾಕರ ಪ್ರಭು.

Voiceoftulunadu

ಶ್ರೇಷ್ಠತೆಗಾಗಿ ಮರುರೂಪ, ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಚೇತನ್‌ ಆರ್ ವಿಶೇಷ ಲೇಖನ;

Voiceoftulunadu

ಸೆಪ್ಟೆಂಬರ್ 4-6 : ಜಗದೊಡೆಯ ಉಡುಪಿ ಶ್ರೀಕೃಷ್ಣನ ಜನ್ಮಾಷ್ಟಮಿ ಸಡಗರ ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳಿಂದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ;

Voiceoftulunadu

Leave a Comment