ತುಳುವ ಮಹಾಸಭೆ ಇಂಟರ್ನ್ಯಾಷನಲ್ ಅಂತರರಾಷ್ಟ್ರೀಯ ಅಧ್ಯಕ್ಷರಾಗಿ ಸರ್ವೋತ್ತಮ ಶೆಟ್ಟಿ ಆಯ್ಕೆ: ಶತಮಾನೋತ್ಸವದ ಹೊಸ್ತಿಲಲ್ಲಿ ತುಳುವ ನಾಗರಿಕತೆಯ ವೈಭವವನ್ನು ಮರುಸ್ಥಾಪಿಸುವ ಮಹಾಸಂಕಲ್ಪ;
ಮಂಗಳೂರು, ಜೂನ್ 28: 1928ರ ಸೆಪ್ಟೆಂಬರ್ 23ರಂದು ಉಡುಪಿಯಲ್ಲಿ ಸ್ಥಾಪನೆಯಾಗಿ, 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಅಂತರರಾಷ್ಟ್ರೀಯ ಅಧ್ಯಕ್ಷರಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ನ ಹಿರಿಯ...
