ವರದಿ /ಚಿತ್ರ : ಈ ಮೀಡಿಯಾ
ಉಡುಪಿ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಸಾಮರ್ಥ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಕೂಡ ಹೆಚ್ಚುತ್ತದೆ. ಕ್ರೀಡಾಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ಅವಕಾಶಗಳು ತೆರೆ ದು ಕೊಳ್ಳು ತ್ತಿ ರು ವು ದ ರಿಂ ದ ಅಧ್ಯಯನದ ಜೊತೆ ಜೊತೆಯಲ್ಲಿಯೇ ಕ್ರೀಡಾ ವಿಭಾಗದಲ್ಲೂ ಕೂಡ ತಮ್ಮ ಸಾಮರ್ಥ್ಯವನ್ನು ತೋರ್ಪಡಿಸಬೇಕು, ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.
ಅವರು ಉಡುಪಿಯ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಬಾಲಕಿಯರ ಸರ್ಕಾರಿ ಪದವಿ ಪೂರ್ವಕಾಲೇಜಿನ ಪ್ರೌಢಶಾಲಾ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಈಜುಕೊಳದಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್, ಡಯಟ್ ಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಸಾಫಲ್ಯ ಟ್ರಸ್ಟ್ ನ ಅಧ್ಯಕ್ಷೆ ಶ್ರೀಮತಿ ರಂಜನಾ ಶೆಟ್ಟಿ, ಪ್ರವರ್ತಕಿ ಶ್ರೀಮತಿ ನಿರುಪಮಾ ಪ್ರಸಾದ್, ಎಸ್ ಡಿ ಎಂ ಸಿ ಗೌರವಾಧ್ಯಕ್ಷೆ ತಾರಾದೇವಿ, ಲತಾ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ರವೀಂದ್ರ ನಾಯಕ್, ನಿತ್ಯಾನಂದ, ಸತ್ಯನಾರಾಯಣ ಜಿ, ವಿಜಯಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ಸಂಘದ ವಿಜಯಕುಮಾರ್ಕಿರಣ್ ಕುಮಾರ್ ಶೆಟ್ಟಿ ಶೆಟ್ಟಿ ವರದರಾಜ ನಾಯಕ್ ಅತಿಥಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪದೋನ್ನತಿ ಹೊಂದಿದ ಲೋಕೇಶ್ ಮತ್ತು ದಾನಿ ಹಾಗೂ ಶಿಕ್ಷಣ ಅಭಿಮಾನಿ ಉಡುಪಿ ಬ್ಲೂಟೂತ್ ಸಂಸ್ಥೆಯ ಡಾ. ರಾಧಿಕಾ ಸೋಮಯಾಜಿಯವರನ್ನು ಸನ್ಮಾನಿಸಲಾಯಿತು.ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರವಿಚಂದ್ರ ಕಾರಂತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಶಿಕ್ಷಕಿ ಇಂದಿರಾ ಸ್ವಾಗತಿಸಿದರು. ಶಿಕ್ಷಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು. ವಸಂತ ಜೋಗಿ ಧನ್ಯವಾದಗೈದರು.
